ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವ 29 ರಿಂದ

ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವ 29 ರಿಂದ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವ ನಡೆಯಲಿದ್ದು, ಸಿದ್ಧತೆಗಳು ಭರದಿಂದ ಸಾಗಿವೆ. ಸರ್ವಧರ್ಮ ಸಮ್ಮೇಳನದ ೮೯ನೇ ಅಧಿವೇಶನವನ್ನು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಉದ್ಘಾಟಿಸುವರು ನ.೨೯ ರಿಂದ ಆರಂಭಗೊAಡು ಡಿ. ೪ರ ವರೆಗೆ ಕಾರ್ಯಕ್ರಮ ನಡೆಯಲಿದ್ದು, ಡಿ. ೨ ರಂದು ಗುರುವಾರ ಸಂಜೆ ೫ ಗಂಟೆಗೆ ಅಮೃತವರ್ಷಿಣಿ ಸಭಾ ಭವನದಲ್ಲಿ ನಡೆಯಲಿರುವ ಸರ್ವಧರ್ಮ ಸಮ್ಮೇಳನದ ೮೯ನೇ ಅಧಿವೇಶನವನ್ನು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಉದ್ಘಾಟಿಸುವರು. ಬೆಂಗಳೂರಿನ ಎಸ್. ವ್ಯಾಸ ಯೋಗ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ. ರಾಮಚಂದ್ರ ಭಟ್ಟ ಅಧ್ಯಕ್ಷತೆ ವಹಿಸುವರು.ಸಾಗರದ ಖ್ಯಾತ ಸಾಹಿತಿ ಸಫ್ರಾಜ್ ಚಂದ್ರಗುತ್ತಿ ಭಾಗವಹಿಸುವರು. ಹೊಸಕಟ್ಟೆ ಉತ್ಸವ, ಕೆರೆಕಟ್ಟೆ ಉತ್ಸವ, ಲಲಿತೋದ್ಯಾನ ಉತ್ಸವ, ಕಂಚಿಮಾರುಕಟ್ಟೆ ಉತ್ಸವ, ಗೌರಿಮಾರುಕಟ್ಟೆ ಉತ್ಸವ ಮತ್ತು ಲಕ್ಷದೀಪೋತ್ಸವ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿಯ ಸಮವಸರಣ ಪೂಜೆಯೊಂದಿಗೆ ಲಕ್ಷ ದೀಪೋತ್ಸವ ಕಾರ್ಯಕ್ರಮಗಳು ಸಮಾಪನಗೊಳ್ಳುತ್ತವೆ..

news desk

times of bengaluru