ಆರೋಗ್ಯ ಇಲಾಖೆಯಿಂದ ಕೋವಿಡ್ ಗೈಡ್‌ಲೈನ್ಸ್

ಆರೋಗ್ಯ ಇಲಾಖೆಯಿಂದ ಕೋವಿಡ್ ಗೈಡ್‌ಲೈನ್ಸ್

ಬೆಂಗಳೂರು: ಡಿಸೆಂಬರ್ ೧೦ಕ್ಕೆ ರಾಜ್ಯದಲ್ಲಿ ನಡೆಯಲಿರುವ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ಆರೋಗ್ಯ ಇಲಾಖೆ ಕೋವಿಡ್ ಗೈಡ್‌ಲೈನ್ಸ್ ಹೊರಡಿಸಿದೆ. ಚುನಾವಣಾ ಸಭೆಗಳಲ್ಲಿ ಭಾಗಿಯಾಗುವವರೆಲ್ಲ ಎರಡು ಡೋಸ್ ವ್ಯಾಕ್ಸಿನ್ ತೆಗೆದುಕೊಂಡಿರಬೇಕು. ದೊಡ್ಡ ಹಾಲ್‌ಗಳಲ್ಲಿ ಚುನಾವಣಾ ಸಭೆ ನಡೆಸಬೇಕು. ಸಭಾಂಗಣವನ್ನ ಸ್ಯಾನಿಟೈಸ್ ಮಾಡಬೇಕು. ಚುನಾವಣಾ ಸಿಬ್ಬಂದಿಯೂ ಸಹ ಎರಡೂ ಡೋಸ್ ವ್ಯಾಕ್ಸಿನ್ ತೆಗೆದುಕೊಂಡಿರಬೇಕು. ಎಲ್ಲರೂ ಕಡ್ಡಾಯ ಮಾಸ್ಕ್ ಧರಿಸಬೇಕು. ನಾಮಪತ್ರ ಸಲ್ಲಿಕೆಗೆ ಕೇವಲ ನಾಲ್ಕು ಜನರಿಗೆ ಮಾತ್ರ ಅವಕಾಶವಿದೆ. ನಾಮಪತ್ರ ಸಲ್ಲಿಕೆಗೆ ಕೇವಲ ಮೂರು ವಾಹನಗಳನ್ನು ಮಾತ್ರ ಬಳಸಬೇಕು. ಚುನಾವಣಾಧಿಕಾರಿಗಳು ಅಭ್ಯರ್ಥಿಗಳಿಗೆ ನಾಮಪತ್ರ ಸಲ್ಲಿಕೆಗೆ ನಿಗದಿತ ಸಮಯ ನೀಡಬೇಕು. ಚುನಾವಣಾ ಪ್ರಚಾರದ ವೇಳೆ ೫೦೦ ಮಂದಿ ಮಾತ್ರ ಹಾಜರಿರಲು ಅವಕಾಶ ನೀಡಲಾಗಿದೆ. ೫೦ ವರ್ಷ ಮೇಲ್ಪಟ್ಟ ಸಿಬ್ಬಂದಿಗೆ ಶುಗರ್ ಹಾಗೂ ಬಿಪಿ ಸಮಸ್ಯೆ ಇದ್ದಲ್ಲಿ ಕಡ್ಡಾಯವಾಗಿ ಫೇಸ್ ಮಾಸ್ಕ್ ಧರಿಸಬೇಕು ಎಂದು ಸೂಚಿಸಿ ಆದೇಶ ಹೊರಡಿಸಿದೆ.

news desk

timesofbengaluru