ಮನೆ ಸಂಪೂರ್ಣ ಹಾನಿಯಾಗಿದ್ದರೆ ೧ ಲಕ್ಷ ರೂ. ಪರಿಹಾರ

ಮನೆ ಸಂಪೂರ್ಣ ಹಾನಿಯಾಗಿದ್ದರೆ 1 ಲಕ್ಷ ರೂ. ಪರಿಹಾರ

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾನಿಯಾದ ರಸ್ತೆ ದುರಸ್ತಿಗೆ ೫೦೦ ಕೋಟಿ ರೂ. ನೀಡಲಾಗಿದೆ. ಮನೆ ಸಂಪೂರ್ಣ ಹಾನಿಯಾಗಿದ್ದರೆ ೧ ಲಕ್ಷ ರೂ. ಪರಿಹಾರ ನೀಡಲಾಗುತ್ತದೆ. ತಕ್ಷಣವೇ ೧ ಲಕ್ಷ ರೂ. ಬಿಡುಗಡೆ ಮಾಡಲು ಸೂಚಿಸಿದ್ದೇವೆ ಎಂದು ತಿಳಿಸಿದ್ದಾರೆ.ಆಗಸ್ಟ್, ಸೆಪ್ಟೆಂಬರ್‌ನಲ್ಲಾದ ಬೆಳೆ ಹಾನಿಗೆ ೧.೫ ಲಕ್ಷ ರೈತರಿಗೆ ೧೩೦ ಕೋಟಿ ರೂ. ಬಿಡುಗಡೆಯಾಗಿದೆ. ಉಳಿದ ೭೯,೦೦೦ ರೈತರಿಗೆ ೫೨ ಕೋಟಿ ಕೂಡಲೇ ಬಿಡುಗಡೆ ಮಾಡಲಾಗುವುದು ಎಂದು ಬೊಮ್ಮಾಯಿ ಹೇಳಿದ್ದಾರೆ.ಬೆಂಗಳೂರು ನಗರ, ಗ್ರಾಮಾಂತರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಹಾಸನ ಜಿಲ್ಲೆಯಲ್ಲಿ ಹೆಚ್ಚು ಹಾನಿಯಾಗಿದೆ. ರಾಜ್ಯದಲ್ಲಿ ಡಿಸಿಗಳ ಖಾತೆಯಲ್ಲಿ ೬೮೯ ಕೋಟಿ ರೂ. ಇದೆ. ಅಗತ್ಯವಿದ್ದಲ್ಲಿ ಹೆಚ್ಚುವರಿ ಪರಿಹಾರ ಬಿಡುಗಡೆ ಮಾಡಲು ಆರ್ಥಿಕ ಇಲಾಖೆ ಅಧಿಕಾರಿಗಳಿಗೆ ಬೊಮ್ಮಾಯಿ ಸೂಚಿಸಿದ್ದಾರೆ. ಕೃಷಿ, ಕಂದಾಯ, ತೋಟಗಾರಿಕೆ ಅಧಿಕಾರಿಗಳಿಂದ ಜಂಟಿ ಸಮೀಕ್ಷೆ ನಡೆಸಿ ವರದಿ ಸಲ್ಲಿಸುವಂತೆ ಸೂಚನೆ ನೀಡಿರುವ ಸಿಎಂ, ಬೆಳೆ ನಷ್ಟ ಪರಿಹಾರ ವಿತರಣೆಯೂ ತ್ವರಿತವಾಗಿ ಆಗಬೇಕು. ೧೫ರಿಂದ ೨೦ ದಿನ ಬೆಳೆ ಹಾನಿ ಸಮೀಕ್ಷೆ ನಡೆಸಲು ತಿಳಿಸಿದ್ದಾರೆ.

news desk

times of bengaluru