ಆಸ್ತಿ ತೆರಿಗೆ ಪಾವತಿಯಲ್ಲಿ ಶೇ ೫೦ರಷ್ಟು ರಿಯಾಯ್ತಿ

ಆಸ್ತಿ ತೆರಿಗೆ ಪಾವತಿಯಲ್ಲಿ ಶೇ ೫೦ರಷ್ಟು ರಿಯಾಯ್ತಿ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಹೊಟೆಲ್, ರೆಸಾರ್ಟ್ ಮನರಂಜನಾ ಪಾರ್ಕ್ಗಳ ಆಸ್ತಿ ತೆರಿಗೆ ಪಾವತಿಯಲ್ಲಿ ಶೇ ೫೦ರಷ್ಟು ರಿಯಾಯ್ತಿ ಘೋಷಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಮೊದಲು ಬೆಂಗಳೂರು ಹೊರತುಪಡಿಸಿ ಕರ್ನಾಟಕದ ಉಳಿದೆಲ್ಲ ಜಿಲ್ಲೆಗಳಿಗೆ ಆಸ್ತಿ ತೆರಿಗೆ ವಿನಾಯ್ತಿ ಘೋಷಿಸಿ ರಾಜ್ಯ ಸರ್ಕಾರ ನವೆಂಬರ್ ೬ರಂದು ಆದೇಶ ಹೊರಡಿಸಿತ್ತು.ಶೇ ೫೦ರಷ್ಟು ತೆರಿಗೆ ಪಾವತಿಸಿ, ಉಳಿದ ಶೇ ೫೦ರಷ್ಟು ರಿಯಾಯಿತಿಗೆ ಹೋಟೆಲ್, ರೆಸಾರ್ಟ್, ರೆಸ್ಟೋರೆಂಟ್ ಮತ್ತು ಮನೋರಂಜನಾ ಪಾರ್ಕ್ಗಳ ಮಾಲೀಕರು ಅರ್ಜಿ ಸಲ್ಲಿಸಬೇಕು. ಈ ಅರ್ಜಿಗಳನ್ನು ಕಂದಾಯ ನಿರೀಕ್ಷಕರು ಪರಿಶೀಲಿಸಿದ ಬಳಿಕ, ಜಿಲ್ಲಾಮಟ್ಟದ ಸಮಿತಿ ಸಂಬAಧಿಸಿದ ಇಲಾಖೆಗೆ ಸಲ್ಲಿಸಲಿದೆ ಎಂದು ರಾಜ್ಯ ಸರ್ಕಾರವು ಸರ್ಕಾರಿ ಆದೇಶದಲ್ಲಿ ಷರತ್ತು ವಿಧಿಸಿತ್ತು.

news desk

times of bengaluru