ರಾಜ್ಯಾದ್ಯಂತ ಮತ್ತೆ ವರುಣನ ಆರ್ಭಟ

ರಾಜ್ಯಾದ್ಯಂತ ಮತ್ತೆ ವರುಣನ ಆರ್ಭಟ

ಬೆಂಗಳೂರು: ನಾಳೆಯಿಂದ ರಾಜ್ಯಾದ್ಯಂತ ಮತ್ತೆ ವರುಣನ ಆರ್ಭಟ ಮುಂದುವರಿಯಲಿದೆ. ಉತ್ತರ ಕರ್ನಾಟಕದಲ್ಲಿ ಚಳಿ ಮತ್ತು ಸುಳಿ ಗಾಳಿಯ ಜೊತೆಗೆ ಒಣ ಹವೆ ಇರಲಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ಚಾಮರಾಜನಗರ, ತುಮಕೂರಿನಲ್ಲಿ ನ. ೨೬ ರಿಂದ ೩ ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಇಂದು ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಶಿವಮೊಗ್ಗ, ಹಾಸನ, ದಾವಣಗೆರೆ, ಚಿಕ್ಕಬಳ್ಳಾಪುರ, ಮೈಸೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಗಳಿವೆ. ಚಳಿ ಸಹ ಹೆಚ್ಚಾಗಲಿದೆ ಎಂದು ಹೇಳಿದೆ.

news desk

times of bengaluru