‘ಲಕ್ಕಿಮ್ಯಾನ್’​ ಸಿನಿಮಾದಲ್ಲಿ ಅಪ್ಪು ಪ್ರಭುದೇವ ಡ್ಯಾನ್ಸ್

‘ಲಕ್ಕಿಮ್ಯಾನ್’​ ಸಿನಿಮಾದಲ್ಲಿ ಅಪ್ಪು ಪ್ರಭುದೇವ ಡ್ಯಾನ್ಸ್

ಡಾರ್ಲಿಂಗ್ ಕೃಷ್ಣ ನಾಯಕ ನಟನಾಗಿ ಕಾಣಿಸಿಕೊಂಡಿರುವ ‘ಲಕ್ಕಿಮ್ಯಾನ್’​ ಸಿನಿಮಾದಲ್ಲಿ ಮೊಟ್ಟ ಮೊದಲ ಬಾರಿಗೆ ಪವರ್‌ಸ್ಟಾರ್ ಪುನೀತ್ ರಾಜ್ಕುಮಾರ್ ನಟಿಸಿದ್ದಾರೆ. ಈಗಾಗಲೇ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದ್ದು, ಸಾಧು ಕೋಕಿಲ ಸ್ಟುಡಿಯೋದಲ್ಲಿ ಡಬ್ಬಿಂಗ್ ಕೆಲಸ ನಡೆಯುತ್ತಿದೆ. ಡಾರ್ಲಿಂಗ್ ಕೃಷ್ಣ ನಾಯಕ ನಟನಾಗಿ ಕಾಣಿಸಿಕೊಂಡಿದ್ದಾರೆ. ಇನ್ನೂ ಅಪ್ಪು ಹಾಗೂ ಬಹುಭಾಷಾ ನಟ ಪ್ರಭುದೇವ​​​ ಇಬ್ಬರೂ ಡಾ.ರಾಜ್ ಮೇಲೆ ರಚಿಸಲಾದ ಹಾಡೊಂದರಲ್ಲಿ ಒಟ್ಟಿಗೆ ಹೆಜ್ಜೆ ಹಾಕಿದ್ದಾರೆ. ಈ ಚಿತ್ರದಲ್ಲಿ ನಾಯಕಿಯರಾಗಿ ಸಂಗೀತ ಶೃಂಗೇರಿ ಹಾಗೂ ರೋಶನಿ ಪ್ರಕಾಶ್ ರಂಗಾಯಣ ರಘು, ಸಾಧುಕೋಕಿಲ, ನಾಗಭೂಷಣ್, ಸುಂದರ್ ರಾಜ್, ಸುಧಾ ಬೆಳವಾಡಿ, ಮಾಳವಿಕ ಸೇರಿದಂತೆ ಅನೇಕ ಕಲಾವಿದರು ನಟಿಸಿದ್ದಾರೆ.

news desk

times of bengaluru