ಶಾಲೆ-ಕಾಲೇಜು ಮತ್ತೇ ಬಂದ್ ಆಗುತ್ತಾ ?

ಶಾಲೆ-ಕಾಲೇಜು ಮತ್ತೇ ಬಂದ್ ಆಗುತ್ತಾ ?

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿನ ಅಬ್ಬರ ಮತ್ತೆ ಶುರುವಾಗಿದ್ದು, ಮುಖ್ಯವಾಗಿ ಶಾಲಾ-ಕಾಲೇಜಿನ ವಿದ್ಯಾರ್ಥಿಗಳೇ ಹೆಚ್ಚಾಗಿ ಸೋಂಕಿಗೆ ತುತ್ತಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಮತ್ತೆ ಶಾಲೆ-ಕಾಲೇಜುಗಳನ್ನು ಬಂದ್ ಮಾಡಲಾಗುವುದಾ ಎಂಬ ಪ್ರಶ್ನೆ ಕಾಡುತ್ತಿದೆ.
ಬೆಂಗಳೂರಿನ ಸುಕ್ರತ ಕಾಲೇಜಿನಲ್ಲಿ ೧೭ ಜನರಿಗೆ ಕೊರೊನಾ ಸೋಂಕು ಪತ್ತೆಯಾಗಿದೆ. ಆನೇಕಲ್ ನ ಸ್ಪೂರ್ತಿ ನಸಿರ್‌ಂಗ್ ಕಾಲೇಜಿನಲ್ಲಿ ೧೨ ಮಂದಿಗೆ ಸೋಂಕು ಕಾಣಿಸಿಕೊಂಡಿದೆ. ಮೈಸೂರಿನ ಕಾಲೇಜಿನಲ್ಲೂ ಕೂಡ ಕೊರೊನಾ ಸ್ಫೋಟವಾಗಿರುವ ಬಗ್ಗೆ ವರದಿಗಳು ತಿಳಿಸುತ್ತಿವೆ.ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಸಂಜೆ ತುರ್ತು ಸಭೆ ನಡೆಸಲಿದ್ದಾರೆ. ಈ ವೇಳೆ ಶಾಲೆ-ಕಾಲೇಜುಗಳನ್ನು ಬಂದ್ ಮಾಡಬೇಕಾ ಅಥವಾ ಕಠಿಣ ನಿಯಮಗಳನ್ನು ಜಾರಿಗೊಳಿಸಬೇಕಾ ಎಂಬ ಕುರಿತು ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ.

 

news desk

times of bengaluru