ಇಬ್ಬರಲ್ಲಿ ಕೊರೊನಾ ಸೋಂಕು ಪತ್ತೆ

ಇಬ್ಬರಲ್ಲಿ ಕೊರೊನಾ ಸೋಂಕು ಪತ್ತೆ

ದೇವನಹಳ್ಳಿ: ಸೌತ್ ಆಫ್ರಿಕಾದಲ್ಲಿ ಒಮಿಕ್ರೋನ್ ಕೋವಿಡ್ ರೂಪಾಂತರಿ ವೈರಸ್ ಕಾಣಿಸಿಕೊಂಡಿದ್ದು, ಇದೀಗ ಅಲ್ಲಿಂದ ಬೆಂಗಳೂರಿಗೆ ಬಂದ ಇಬ್ಬರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಸೋಂಕು ಕಂಡು ಬಂದ ಪ್ರಯಾಣಿಕರನ್ನು ಬಿಬಿಎಂಪಿ ವ್ಯಾಪ್ತಿಯ ಬೊಮ್ಮನಹಳ್ಳಿಯಲ್ಲಿ ಒಬ್ಬರನ್ನು ಕ್ವಾರಂಟೈನ್ ಮಾಡಲಾಗಿದ್ದು, ಮತ್ತೊಬ್ಬರನ್ನು ಖಾಸಗಿ ಹೋಟೆಲ್‌ನಲ್ಲಿ ಕ್ವಾರಂಟೈನ್ ಮಾಡಲಾಗಿದೆ.  ಸೌತ್ ಆಫ್ರಿಕಾದಿಂದ ಬೆಂಗಳೂರಿಗೆ ಸುಮಾರು ೯೪ ಪ್ರಯಾಣಿಕರು ಆಗಮಿಸಿದ್ದು, ಆ ಪೈಕಿ ಇಬ್ಬರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಇವರಲ್ಲಿ ಹೊಸ ತಳಿಯ ವೈರಸ್ ಕಂಡು ಬಂದಿರುವುದರ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿಲ್ಲ.

 

news desk

times of bengaluru