ಮತ್ತೊಮ್ಮೆ ಮುಖ್ಯಮಂತ್ರಿ ಬದಲಾವಣೆ ಖಚಿತ

ಮತ್ತೊಮ್ಮೆ ಮುಖ್ಯಮಂತ್ರಿ ಬದಲಾವಣೆ ಖಚಿತ

ವಿಜಯಪುರ: ರಾಜ್ಯ ಬಿಜೆಪಿ ಸರಕಾರದಲ್ಲಿ ಮತ್ತೊಮ್ಮೆ ಮುಖ್ಯಮಂತ್ರಿ ಬದಲಾವಣೆ ಖಚಿತ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿ, ರಾಜ್ಯದಲ್ಲಿ ಬಿಜೆಪಿ ಸರಕಾರದ ಭ್ರಷ್ಟಾಚಾರ, ಆಡಳಿತ ಯಂತ್ರದ ಕುಸಿತದ ಕುರಿತು ಕಾಂಗ್ರೆಸ್ ನಾಯಕರೇನೂ ಮಾತನಾಡುತ್ತಿಲ್ಲ. ಬದಲಾಗಿ ಬೊಮ್ಮಾಯಿ ಸರಕಾರದಲ್ಲಿರುವ ಸಚಿವರೇ ಮಾತನಾಡುತ್ತಿದ್ದಾರೆ. ಇತರ ಸಚಿವರಿಗಿಂತ ಒಂದು ಹೆಜ್ಜೆ ಮುಂದೆ ಹೋಗಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಸಚಿವ ಮುರುಗೇಶ ನಿರಾಣಿ ಮುಂದಿನ ಮುಖ್ಯಮಂತ್ರಿ ಎಂದು ಹೇಳಿದ್ದಾರೆ. ಸಿಎಂ ಬದಲಾವಣೆ ವಿಚಾರ ನಾನು ಮಾತನಾಡುವುದಿಲ್ಲ, ನಿರಾಣಿ ಮುಂದಿನ ಸಿಎಂ ಎಂದು ಹೇಳಿದ ಸಚಿವರೇ ಈ ಬಗ್ಗೆ ಹೇಳಬೇಕು ಎಂದರು. ಈ ಹಿಂದೆ ಯಡಿಯೂರಪ್ಪ ಮೇಲೆ ವಿಶ್ವಾಸ ಕಳೆದುಕೊಂಡರೆAದು ರಾಜೀನಾಮೆ ಪಡೆಯಲಾಯಿತು.ಅನಂತರ ಅಧಿಕಾರಕ್ಕೆ ಬಂದ ಬಸವರಾಜ ಬೊಮ್ಮಾಯಿ ಸರಕಾರದ ಮೇಲೂ ಅವರದೇ ಸಚಿವರು ಇದೀಗ ಸಂಶಯ ವ್ಯಕ್ತಪಡಿಸುತ್ತಿದ್ದಾರೆ. ಹೀಗಾಗಿ ಬೊಮ್ಮಾಯಿ ಕೂಡ ರಾಜೀನಾಮೆ ಕೊಡಬೇಕು ಎಂದರು.

news desk

times of bengaluru