ರಾಜ್ಯದ ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆ

ರಾಜ್ಯದ ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆ

ಬೆಂಗಳೂರು: ಡಿಸೆಂಬರ್ ೩ ವರೆಗೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನಲ್ಲಿ ಇಂದಿನಿAದ ೩ ದಿನ ಭಾರೀ ಮಳೆಯಾಗಲಿದೆ.ಬಂಗಾಳ ಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿನ ವಾಯುಭಾರ ಕುಸಿತ ಸಾಧ್ಯತೆ ಕಾರಣದಿಂದ ಭಾರೀ ಮಳೆಯಾಗಲಿದೆ. ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಉತ್ತರ ಕನ್ನಡ, ಶಿವಮೊಗ್ಗ, ಹಾಸನ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ತುಮಕೂರು ಜಿಲ್ಲೆಯಲ್ಲಿ ನ. ೩೦ರಿಂದ ಡಿ. ೩ರವರೆಗೆ ಮಳೆಯಾಗುವ ಸಂಭವವಿದೆ.

news desk

times of bengaluru