ಕ್ಯಾನ್ಸರ್ ರೋಗಿಗಳಿಗೆ ಕೂದಲು ದಾನ ಮಾಡಿದ ಪ್ರಜ್ವಲ್

ಕ್ಯಾನ್ಸರ್ ರೋಗಿಗಳಿಗೆ ಕೂದಲು ದಾನ ಮಾಡಿದ ಪ್ರಜ್ವಲ್

 

ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಕೂದಲನ್ನು ಕತ್ತರಿಸಿದ್ದಾರೆ. ನಾಯಕನಾಗಿ ನಟಿಸುತ್ತಿರುವ ೩೫ ನೇ ಚಿತ್ರ ‘ಮಾಫಿಯಾ’ ಚಿತ್ರಕ್ಕಾಗಿ ಪ್ರಜ್ವಲ್ ಕೂದಲನ್ನು ಕತ್ತರಿಸಿದ್ದಾರೆ. ವಿಶೇಷ ಅಂದ್ರೆ ಆ ಕೂದಲನ್ನು ಕ್ಯಾನ್ಸರ್ ರೋಗಿಗಳಿಗೆ ದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ.
‘ಮಮ್ಮಿ’ ಮತ್ತು ‘ದೇವಕಿ’ಚಿತ್ರಗಳ ಮೂಲಕ ಜನಪ್ರಿಯರಾಗಿರುವ ಮಾಫಿಯಾ ಚಿತ್ರಕ್ಕೆ ಲೋಹಿತ್ ಆಕ್ಷನ್ ಕಟ್ ಹೇಳುತ್ತಿದ್ದು, ಚಿತ್ರದ ಮುಹೂರ್ತ ಸಮಾರಂಭ ಡಿಸೆಂಬರ್ ೨ರಂದು ನಡೆಯಲಿದೆ. ಡಿ.೬ರಿಂದ ಚಿತ್ರೀಕರಣ ಆರಂಭವಾಗಲಿದೆ.ನಾಯಕಿಯಾಗಿ ಅದಿತಿ ಪ್ರಭುದೇವ ನಟಿಸಲಿದ್ದಾರೆ. ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್.ಬಿ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.

news desk

times of bengaluru