ಎರಡು ಡೋಸ್ ಲಸಿಕೆ ಪಡೆಯುವುದು ಕಡ್ಡಾಯ

ಎರಡು ಡೋಸ್ ಲಸಿಕೆ ಪಡೆಯುವುದು ಕಡ್ಡಾಯ

ಬೆಂಗಳೂರು: ರಾಜ್ಯ ಸರ್ಕಾರ ಇಂದು, ನಾಳೆ ಮಹತ್ವದ ಆದೇಶ ಹೊರಡಿಸುವ ಸಾಧ್ಯತೆಯಿದೆ. ಎರಡು ಡೋಸ್ ಲಸಿಕೆ ಪಡೆದಿರುವ ಸರ್ಟಿಫಿಕೇಟ್ ಇಲ್ಲದೆ ಹೋದರೆ ಮೆಟ್ರೋದಲ್ಲಿ ಪ್ರಯಾಣ ಮಾಡಲು ಅವಕಾಶ ನೀಡದಂತೆ ಸರ್ಕಾರ ಆದೇಶ ಹೊರಡಿಸಲಿದೆ. ಬಿಎಂಟಿಸಿ ಬಸ್, ಥಿಯೇಟರ್, ಮಾಲ್, ಸ್ವಿಮ್ಮಿಂಗ್ ಪೂಲ್, ಪಾರ್ಕ್, ರೆಸ್ಟೋರೆಂಟ್, ಪಬ್ ಸೇರಿದಂತೆ ಸಾರ್ವಜನಿಕ ಸ್ಥಳಗಳಿಗೆ ಹೋಗುವ ಮೊದಲು ಎರಡು ಡೋಸ್ ಲಸಿಕೆ ಪಡೆಯುವುದು ಕಡ್ಡಾಯ ಅಂತ ರಾಜ್ಯ ಸರ್ಕಾರ ಇಂದು ಅಥವಾ ನಾಳೆ ಆದೇಶ ಹೊರಡಿಸಬಹುದು. ಬಿಬಿಎಂಪಿ ಲಸಿಕೆ ಕಡ್ಡಾಯಗೊಳಿಸುವಂತೆ ಸರ್ಕಾರಕ್ಕೆ ಮನವಿ ಮಾಡಿತ್ತು. ಬಿಬಿಎಂಪಿ ಪ್ರಸ್ತಾವನೆಗೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು, ನಾಳೆಯಿಂದಲೇ ಹೊಸ ರೂಲ್ಸ್ ಜಾರಿಯಾಗುವ ಸಾಧ್ಯತೆಯಿದೆ.

news desk

times of bengaluru