ಪಿಸ್ತೂಲ್ ತೋರಿಸಿ ಸಿನಿಮೀಯ ರೀತಿಯಲ್ಲಿ ದರೋಡೆ
ಬೆಂಗಳೂರು : ವೈದ್ಯ ಸಿಬ್ಬಂದಿ ಸೋಗಿನಲ್ಲಿ ಬಂದಿದ್ದ ಮೂವರು ಪಿಸ್ತೂಲ್ ತೋರಿಸಿ ಸಿನಿಮೀಯ ರೀತಿ ದರೋಡೆ ಮಾಡಿರುವ ಘಟನೆ ಯಶವಂತಪುರ ಠಾಣಾ ವ್ಯಾಪ್ತಿಯ ಎಸ್ಬಿಎಂ ಕಾಲೋನಿಯಲ್ಲಿ ನಡೆದಿದೆ. ಘಟನೆ ನಡೆದಾಗ ಮನೆಯಲ್ಲಿ ಸಂಪತ್ ಸಿಂಗ್ ಅವರು ಮನೆಯಲ್ಲಿ ಇರಲಿಲ್ಲ. ಅವರ ತಾಯಿ ಹಾಗೂ ಪತ್ನಿ ಇಬ್ಬರೇ ಮನೆಯಲ್ಲಿದ್ದರು. ಕಾರು ಹಾಗೂ ಬೈಕಿನಲ್ಲಿ ದುಷ್ಕರ್ಮಿಗಳು ಮನೆಗೆ ಬಂದಿದ್ದರು. ಯಶವಂತಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಲಸಿಕೆ ಹಾಕುವುದಾಗಿ ಸಂಪತ್ ಸಿಂಗ್ ಎಂಬುವವರ ಮನೆಗೆ ನುಗ್ಗಿದ ದುಷ್ಕರ್ಮಿಗಳು ಪಿಸ್ತೂಲ್ ತೋರಿಸಿ ೫೦ ಗ್ರಾಂ ಚಿನ್ನಾಭರಣ ದೋಚಿ, ಪರಾರಿಯಾಗಿದ್ದಾರೆ.
news desk
times of bengaluru