ತಪ್ಪು ಯಾರೇ ಮಾಡಿದರೂ ಅವರ ವಿರುದ್ಧ ಕ್ರಮ ವಹಿಸಲಿ

ತಪ್ಪು ಯಾರೇ ಮಾಡಿದರೂ ಅವರ ವಿರುದ್ಧ ಕ್ರಮ ವಹಿಸಲಿ

ಬೆಂಗಳೂರು: ಬಿಜೆಪಿ ಶಾಸಕ, ಬಿಡಿಎ ಅಧ್ಯಕ್ಷ ಎಸ್.ಆರ್. ವಿಶ್ವನಾಥ್ ಹತ್ಯೆಗೆ ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ಸಂಚು ರೂಪಿಸಿದ್ದಾರೆ ಎನ್ನಲಾದ ವಿಡಿಯೋ ಬಹಿರಂಗ ಪ್ರಕರಣಕ್ಕೆ ಸಂಬAಧಿಸಿದAತೆ ಪ್ರತಿಕ್ರಿಯಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿ, ತಪ್ಪು ಯಾರು ಮಾಡಿದ್ದಾರೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಿ ಎಂದಿದ್ದಾರೆ. ಎಸ್.ಆರ್. ವಿಶ್ವನಾಥ್ ಹತ್ಯೆಗೆ ಸ್ಕೆಚ್ ವಿಚಾರಕ್ಕೆ ಸಂಬAಧಿಸಿದAತೆ ಇದೆಲ್ಲ ರಾಜಕೀಯದಲ್ಲಿ ಇದ್ದಿದ್ದೆ. ಎಲ್ಲಾ ರೌಡಿಗಳು ವಿಶ್ವನಾಥ್ ಜೊತೆ ಇದ್ದಾರೆ. ಅವರ ಲಿಸ್ಟ್ ಬೇಕಾದರೂ ಕೊಡುತ್ತೇನೆ. ಇದರಲ್ಲಿ ಯಾರೇ ತಪ್ಪು ಮಾಡಿದರೂ ಅವರ ವಿರುದ್ಧ ಕ್ರಮ ಕೈಗೊಳ್ಳಲಿ ಎಂದರು. ಗೋಪಾಲಕೃಷ್ಣ ಜೊತೆಯೂ ನಾನು ಮಾತನಾಡಿದ್ದೇನೆ. ನಾನು ಯಾವುದೇ ತಪ್ಪು ಮಾಡಿಲ್ಲ ಎಂದು ಹೇಳಿದ್ದಾರೆ. ತಪ್ಪು ಯಾರೇ ಮಾಡಿದರೂ ಅವರ ವಿರುದ್ಧ ಕ್ರಮ ಜರುಗಿಸಲಿ. ನಾನು ವಿಡಿಯೋ ನೋಡಿಲ್ಲ, ವಿಡಿಯೋ ನೋಡಿ ಈ ಬಗ್ಗೆ ಮಾತನಾಡುತ್ತೇನೆ ಎಂದು ಹೇಳಿದರು.

news desk

times of bengaluru