ಕಾರು ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು

ಕಾರು ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು

ಬೆಂಗಳೂರು: ಕಾರು ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ನಗರದ ಹೊಸಕೆರೆಹಳ್ಳಿ ನೈಸ್ ರೋಡ್ ಜಂಕ್ಷನ್ ಬಳಿ ನಡೆದಿದೆ. ರಾಗಿ ಕಣ ಕೆಲಸ ಮುಗಿಸಿ ರಸ್ತೆಗೆ ಬೈಕ್ ಅಡ್ಡ ನಿಲ್ಲಿಸಿ ಊಟ ಮಾಡುತ್ತಿದ್ದರು. ಈ ವೇಳೆ ಅತಿ ವೇಗವಾಗಿ ಬಂದ ಕಾರು ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರ ಗಾಯಗೊಂಡಿದ್ದಾರೆ.ಬಿAದು, ಗಾಳಿ ಹೊನ್ನಮ್ಮ ಮೃತರು ಎಂದು ಹೇಳಲಾಗಿದೆ. ಘಟನಾ ಸ್ಥಳಕ್ಕೆ ಡಿಸಿಪಿ ಕುಲ್‌ದೀಪ್ ಕುಮಾರ್ ಜೈನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕುಮಾರಸ್ವಾಮಿ ಲೇಔಟ್ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಕಾರನ್ನು ವಶಕ್ಕೆ ಪಡೆದಿದ್ದಾರೆ.

 

news desk

times of bengaluru