ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ
ಬೆಂಗಳೂರು : ರಾಜ್ಯದಲ್ಲಿ ಇಂದಿನಿAದ ಇನ್ನೂ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರ್ನಾಟಕ, ಆಂಧ್ರಪ್ರದೇಶ, ಒಡಿಶಾ, ಗುಜರಾತ್ ಸೇರಿದಂತೆ ೧೦ ರಾಜ್ಯಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಡಿಸೆಂಬರ್ ೪ ರವರೆಗೂ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ.ಇಂದಿನಿAದ ಡಿ. ೪ರವರೆಗೂ ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಕೋಲಾರ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
news desk
times of bengaluru