ಕೇಬಲ್ ಅಳವಡಿಕೆ ಕಾಮಗಾರಿ ಪರಿಶೀಲನೆ
ಹೆಚ್ಎಸ್ಆರ್ ಬಡಾವಣೆಯಲ್ಲಿ ಅಂಡರ್ಗ್ರೌAಡ್ ಕೇಬಲ್ ಅಳವಡಿಕೆ ಕಾಮಗಾರಿಯನ್ನು ಇಂಧನ ಖಾತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸುನಿಲ್ ಕುಮಾರ್ ಪರಿಶೀಲಿಸಿದರು. ಡಿಸೆಂಬರ್ ಅಂತ್ಯದ ವೇಳೆಗೆ ಮೊದಲ ಹಂತದ, ಎರಡನೇ ಹಂತದ ಕಾಮಗಾರಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ದೇಶದಲ್ಲಿಯೇ ಮಾದರಿ ಇಂಧನ ಇಲಾಖೆಯ ತರಬೇತಿ ಕೇಂದ್ರವನ್ನು ಜನವರಿ ತಿಂಗಳಲ್ಲಿ ಸ್ಥಾಪಿಸಿ, ಉಳಿದೆಲ್ಲ ಕಾಮಗಾರಿಗಳ ವೇಗ ಹೆಚ್ಚಿಸಬೇಕೆಂದು ಸೂಚಿಸಿದರು.ಶಾಸಕ ಎಂ. ಸತೀಶ್ ರೆಡ್ಡಿ ಮಾತನಾಡಿ, ಹೆಚ್ಎಸ್ಆರ್ ಬಡಾವಣೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ಕಮಾಂಡ್ ಸೆಂಟರ್ಗೆ ವಿದೇಶಿ ತಂತ್ರಜ್ಞಾನವನ್ನು ಬಳಕೆ ಮಾಡಿಕೊಂಡು ಇಡೀ ಬೆಂಗಳೂರು ವಿದ್ಯುತ್ ನಿಯಂತ್ರಣ ಮತ್ತು ಸುಲಭವಾಗಿ ಪವರ್ ಫೈಲ್ಯುರ್ ಕಂಡು ಹಿಡಿಯುವ ತಂತ್ರಜ್ಞಾನವನ್ನು ಅಳವಡಿಸಲಾಗಿದೆ. ಜನವರಿ ತಿಂಗಳಲ್ಲಿ ಮುಖ್ಯಮಂತ್ರಿಗಳು ಈ ಭವನವನ್ನು ಉದ್ಘಾಟನೆಗೊಳಿಸಲಿದ್ದಾರೆ ಎಂದು ತಿಳಿಸಿದರು.
news desk
times of bengaluru