ರಾಜ್ಯದಲ್ಲಿ 7.50 ಕೋಟಿ ಡೋಸ್ ಕೋವಿಡ್ ಲಸಿಕೆ

ರಾಜ್ಯದಲ್ಲಿ 7.50 ಕೋಟಿ ಡೋಸ್ ಕೋವಿಡ್ ಲಸಿಕೆ

ಬೆಂಗಳೂರು : ರಾಜ್ಯದಲ್ಲಿ 7.50 ಕೋಟಿ ಡೋಸ್ ಕೋವಿಡ್ ಲಸಿಕೆಯನ್ನು ನೀಡಲಾಗಿದೆ ಎಂದು ಆರೋಗ್ಯ, ವೈದ್ಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಒಂದು ಮತ್ತು ಎರಡನೆ ಡೋಸ್ ಲಸಿಕೆ ಸೇರಿ ಈ ಪ್ರಮಾಣದಲ್ಲಿ ಲಸಿಕೆ ನೀಡಲಾಗಿದೆ. ನಿನ್ನೆ ಒಂಬತ್ತೂವರೆ ಲಕ್ಷ ಜನರು ಕೋವಿಡ್ ಲಸಿಕೆ ಪಡೆದಿರುವುದು ದಾಖಲೆ ನಿರ್ಮಿಸಲಾಗಿದೆ. ಶೇ.೬೨ರಷ್ಟು ಜನರು ಎರಡು ಡೋಸ್ ಲಸಿಕೆ ಪಡೆದಿದ್ದಾರೆ. ಶೇ.೯೨ರಷ್ಟು ಜನ ಮೊದಲ ಡೋಸ್ ಲಸಿಕೆ ಪಡೆದಿದ್ದಾರೆ. ಮಾಲ್ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಎರಡು ಡೋಸ್ ಲಸಿಕೆ ಪಡೆದವರಿಗೆ ಮಾತ್ರ ಅವಕಾಶ ನೀಡಬೇಕೆಂಬ ಸಲಹೆ ಬಂದಿದೆ. ಆದರೆ ಆ ಬಗ್ಗೆ ಇನ್ನೂ ನಿರ್ಧಾರ ಮಾಡಿಲ್ಲ. ಮಾಲ್ ಮತ್ತಿತರ ಸಾರ್ವಜನಿಕ ಸ್ಥಳಗಳ ಪ್ರವೇಶಕ್ಕೆ ಎರಡೂ ಡೋಸ್ ಲಸಿಕೆ ಪಡೆಯುವುದು ಕಡ್ಡಾಯ ಮಾಡಿಲ್ಲ. ಈ ಸಂಬAಧ ಸಲಹೆ ಬಂದಿದ್ದು, ದೆಹಲಿಯಿಂದ ಮುಖ್ಯಮಂತ್ರಿ ಬಂದ ಬಳಿಕ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು. ಈ ಹಿಂದಿನ ಅನುಭವದ ಹಿನ್ನೆಲೆಯಲ್ಲಿ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.

news desk

timesofbengaluru