ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ತರುವೆ

ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ತರುವೆ

ಬೆಂಗಳೂರು: ರಾಜ್ಯದಲ್ಲಿ ಮತ್ತೊಮ್ಮೆ ಭಾರತೀಯ ಜನತಾ ಪಕ್ಷವನ್ನು ಅಧಿಕಾರಕ್ಕೆ ತರುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತೂಮ್ಮೆ ಜಯಗಳಿಸಿ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು. ಮುಖ್ಯಮಂತ್ರಿಗಳಾಗಿ ನಾಲ್ಕು ತಿಂಗಳ ತಮ್ಮ ಅನುಭವವನ್ನು ಬಿಚ್ಚಿಟ್ಟ ಮುಖ್ಯಮಂತ್ರಿಗಳು, ಸಾಮಾನ್ಯವಾಗಿ ಮುಖ್ಯಮಂತ್ರಿಗಳ ಕುರ್ಚಿ ಹಾಟ್ ಸೀಟ್ ಎಂದೇ ಗುರುತಿಸಲಾಗಿದೆ. ಆದರೆ, ನಾವು ಉತ್ತಮ ಕೆಲಸ ಮಾಡುತ್ತಿದ್ದರೆ, ಕುರ್ಚಿಯ ಬಿಸಿ ತಗ್ಗುತ್ತದೆ ಎಂದರು,೨೦೨೩ರ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ತರುತ್ತೇನೆ ಎಂದು ತಿಳಿಸಿದರು. ನಾನು ಜನರ ಜತೆ ನಿಕಟ ಸಂಪರ್ಕ ಹೊಂದಿದ್ದೇನೆ. ಹಲವಾರು ಕಾರ್ಯಕ್ರಮಗಳನ್ನು ರೂಪಿಸಿದ್ದೇನೆ ಎಂದರು.

news desk

times of bengaluru