ಬಹುತೇಕ ಜಿಲ್ಲೆಗಳಲ್ಲಿ ಡಿ. 7 ರವರೆಗೂ ಸಾಧಾರಣ ಮಳೆ

ಬಹುತೇಕ ಜಿಲ್ಲೆಗಳಲ್ಲಿ ಡಿ. 7 ರವರೆಗೂ ಸಾಧಾರಣ ಮಳೆ

ಬೆಂಗಳೂರು : ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಡಿಸೆಂಬರ್ ೭ರವರೆಗೂ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಗುಜರಾತ್‌ನಲ್ಲಿ ಇಂದು ಮಳೆಯಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ತಮಿಳುನಾಡು, ಕೇರಳ, ಆಂಧ್ರಪ್ರದೇಶ, ಕರ್ನಾಟಕ ರಾಜ್ಯಗಳು ಭಯಂಕರ ಮಳೆಗೆ ತತ್ತರಿಸಿವೆ. ಗುಜರಾತ್‌ನಲ್ಲಿ ಇಂದು ಭಾರೀ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು, ರಾಮನಗರದಲ್ಲಿ ಮಳೆಯಾಗಲಿದೆ.
ಚಿಕ್ಕಬಳ್ಳಾಪುರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಬಳ್ಳಾರಿ, ಕೊಪ್ಪಳ, ರಾಯಚೂರು, ಬೀದರ್‌ನಲ್ಲಿ ಒಣಹವೆ ಮುಂದುವರೆಯಲಿದೆ.

news desk

times of bengaluru