ಸರಕಾರದ ವಿರುದ್ಧ ಜನಜಾಗೃತಿ ಸಹಿ ಸಂಗ್ರಹಣಾ ಚಳುವಳಿ

ಸರಕಾರದ ವಿರುದ್ಧ ಜನಜಾಗೃತಿ ಸಹಿ ಸಂಗ್ರಹಣಾ ಚಳುವಳಿ

ಬೆಂಗಳೂರು: ರಸ್ತೆ ಗುಂಡಿ ಮುಕ್ತ ಬೆಂಗಳೂರು ನಿರ್ಮಾಣದ ಗುರಿ ಹೊಂದಿರುವ ಆಮ್ ಆದ್ಮಿ ಪಕ್ಷ(ಆಪ್) ಬೆಂಗಳೂರಿನಲ್ಲಿರುವ ರಸ್ತೆ ಗುಂಡಿಗಳ ಬಗ್ಗೆ ಸರ್ಕಾರದ ವಿರುದ್ಧ ಜನಜಾಗೃತಿ ಸಹಿ ಸಂಗ್ರಹಣಾ ಚಳುವಳಿ ಹಮ್ಮಿಕೊಂಡಿದೆ.
ಸುದ್ದಿಗೋಷ್ಠಿಯಲ್ಲಿ ಬೆಂಗಳೂರು ನಗರ ಆಪ್ ಉಪಾಧ್ಯಕ್ಷ ಬಿ.ಟಿ.ನಾಗಣ್ಣ ಮಾಹಿತಿ ನೀಡಿದರು. ತೆರೆದ ವಾಹನ ಮೂಲಕ ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿಯ ಭ್ರಷ್ಟಾಚಾರವನ್ನು ಬೆಂಗಳೂರಿನ ಮೂಲೆಮೂಲೆಗೆ ತಲುಪಿಸುತ್ತೇವೆ. ಹತ್ತು ದಿನಗಳಲ್ಲಿ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಜನಜಾಗೃತಿ ಮಾಡಿ, ಲಕ್ಷಾಂತರ ಬೆಂಗಳೂರಿಗರ ಸಹಿ ಸಂಗ್ರಹ ಮಾಡಿ ಸರ್ಕಾರದ ಮೇಲೆ ಒತ್ತಡ ಹೇರುವುದಾಗಿ ತಿಳಿಸಿದರು.. ಮೆಜೆಸ್ಟಿಕ್ ರೈಲ್ವೆ ನಿಲ್ದಾಣದ ಹತ್ತಿರವಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಲಾಗುವುದು ಎಂದು ಹೇಳಿದ್ದಾರೆ.

 

news desk

times of bengaluru