ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಮ್ ಇನ್ನಿಲ್ಲ

ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಮ್ ಇನ್ನಿಲ್ಲ

ಬೆಂಗಳೂರು: ಮನೆಯಲ್ಲಿ ಪೂಜೆ ಮಾಡುವಾಗ ತಲೆ ಸುತ್ತಿ ಬಿದ್ದಿದ್ದು, ತಲೆಗೆ ಗಾಯವಾಗಿತ್ತು. ಈ ಹಿನ್ನೆಲೆಯಲ್ಲಿ ಅವರನ್ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿ ಆಗದೇ ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಮ್ (೮೩)ಕೊನೆಯುಸಿರೆಳೆದಿದ್ದಾರೆ. ಬೆಂಗಳೂರಿನ ವಿದ್ಯಾಪೀಠ ಸರ್ಕಲ್ ನಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಸ್ಕ್ಯಾನಿಂಗ್ ರಿಪೋರ್ಟ್ನಲ್ಲಿ ಮೆದುಳಿನಲ್ಲಿ ರಕ್ತಸ್ರಾವ ಆಗಿರೋದು ಗೊತ್ತಾಗಿತ್ತು. ಇದರ ಬೆನ್ನಲ್ಲೇ ಸ್ಥಿತಿ ಗಂಭೀರವಾಗಿದ್ದರಿAದ ಕೋಮಾಗೆ ಜಾರಿದ್ದರು. ಆದರೆ, ಮೂರು ದಿನಗಳ ಬಳಿಕ ಅವರು ಕೊನೆಯುಸಿರೆಳೆದಿದ್ದಾರೆ.
ಆಸ್ಪತ್ರೆಗೆ ನಟ ಶಿವರಾಜ್ ಕುಮಾರ್, ದೊಡ್ಡಣ್ಣ, ಗಿರಿಜಾ ಲೋಕೇಶ್, ಹಾಗೂ ವಿಷ್ಣುವರ್ಧನ್ ಪತ್ನಿ ಭಾರತಿ ಸೇರಿ ಅನೇಕರು ಭೇಟಿ ನೀಡಿ, ಆರೋಗ್ಯ ವಿಚಾರಿಸಿದ್ದರು. ನಾಳೆ ಹಿರಿಯ ನಟನ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ

news desk

times of bengaluru