ಪೋಷಕರು, ಸಿಬ್ಬಂದಿಗೂ 2 ಡೋಸ್ ಲಸಿಕೆ ಕಡ್ಡಾಯ

ಪೋಷಕರು, ಸಿಬ್ಬಂದಿಗೂ 2 ಡೋಸ್ ಲಸಿಕೆ ಕಡ್ಡಾಯ

ಬೆಂಗಳೂರು :ಶಾಲಾ-ಕಾಲೇಜು ಮಕ್ಕಳ ಪೋಷಕರು, ಸಿಬ್ಬಂದಿಗೂ ೨ ಡೋಸ್ ಲಸಿಕೆ ಕಡ್ಡಾಯ ಮಾಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ರಾಜ್ಯದಲ್ಲಿ ಈಗಾಗಲೇ ಒಮಿಕ್ರಾನ್ ಸೋಂಕು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಒಮಿಕ್ರಾನ್ ಸೋಂಕು ವೇಗವಾಗಿ ಹರಡುತ್ತೆ ಎನ್ನುತ್ತಿದ್ದಾರೆ.ಇನ್ನು ಮೊದಲ ಕೊರನಾ ಪ್ರಕರಣಗಳಿಗೆ ಕ್ಲಸ್ಟರ್ ಎಂದು ಕರೆಯಲಾಗುತ್ತಿತ್ತು. ಈಗ ೩ ಪ್ರಕರಣಗಳಿಗೆ ಕ್ಲಸ್ಟರ್ ಮಾಡಲಾಗುತ್ತಿದೆ. ಅಪಾರ್ಟ್ ಮೆಂಟ್ ಭೇಟಿಗೂ ಇನ್ಮುಂದೆ ೨ ಡೋಸ್ ಲಸಿಕೆ ಕಡ್ಡಾಯ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

news desk

times of bengaluru