ಬೆಂಗಳೂರು: ಸೆಲೆಬ್ರಿಟಿಗಳಿಗೆ ಡ್ರಗ್ಸ್ ಸರಬರಾಜು ಮಾಡಿದ ಆರೋಪದ ಹಿನ್ನೆಲೆಯಲ್ಲಿ ಬಿಗ್ ಬಾಸ್ ಖ್ಯಾತಿಯ ಮಸ್ತಾನ್ ಚಂದ್ರ ನಿವಾಸದ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.
ಸ್ಯಾಂಡಲ್ವುಡ್ ಡ್ರಗ್ಸ್ ನಂಟಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಿಂದಪುರ ಪೊಲೀಸರು ದಾಳಿ ಮಾಡಿದ್ದಾರೆ. ಸಂಜಯ್ ನಗರದ ಮಸ್ತಾನ್ ಚಂದ್ರ ನಿವಾಸದ ಮೇಲೆ ಬೆಳ್ಳಂಬೆಳಿಗ್ಗೆ ಬಾಣಸವಾಡಿ ಎಸಿಪಿ ಸಕ್ರಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ನೈಜಿರಿಯಾ ಮೂಲದ ಡ್ರಗ್ಸ್ ಪೆಡ್ಲರ್ ಬಂಧಿಸಿ ವಿಚಾರಣೆ ನಡೆಸಿದಾಗ ಮಸ್ತಾನ್ ಚಂದ್ರ ಮತ್ತು ಕೇಶವ ಅವರ ಹೆಸರು ಬಾಯ್ಬಿಟ್ಟಿದ್ದ. ಕೋರ್ಟಿನಿಂದ ಸರ್ಚ್ ವಾರೆಂಟ್ ಪಡೆದು ಪೊಲೀಸರು ದಾಳಿ ಮಾಡಿದ್ದಾರೆ ಎಂದು ಹೇಳಲಾಗಿದೆ.
NEWS DESK
TIMES OF BENGALURU