ಬೆಂಗಳೂರು : ಮೀಸಲಾತಿಗೆ ಅಗ್ರಹಿಸಿ ಮಾರ್ಚ್ 5 ರಂದು ಪಂಚಮಸಾಲಿ ಉಪವಾಸ ಸತ್ಯಾಗ್ರಹಕ್ಕೆ ಕರೆ ನೀಡಿದ್ದರು. ಆದರೆ ಇದೀಗ ಉಪವಾಸ ಸತ್ಯಾಗ್ರಹ ಮಾಡುವುದಿಲ್ಲ ಎಂದು ಪಂಚಮಸಾಲಿ ಕೂಡಲಸಂಗಮ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.
ಈ ಬಗ್ಗೆ ಮಾತನಾಡಿದ ಸ್ವಾಮೀಜಿ, ಸಿಎಂ ಯಡಿಯೂರಪ್ಪ ತಮ್ಮ ಪರಮಾಧಿಕಾರ ಬಳಸಿ ಮೀಸಲಾತಿ ಬೇಡಿಕೆಯನ್ನು ಈಡೇರಿಸಬೇಕು. ನಮ್ಮ ಬೇಡಿಕೆ ಈಡೇರುವವರೆಗೂ ಫ್ರೀಡಂಪಾರ್ಕ್ ನಲ್ಲಿ ಧರಣಿ ಮುಂದುವರೆಯಲಿದೆ ಎಂದರು. ಸಮುದಾಯದ ಶಾಸಕರು ಪಕ್ಷಬೇಧ ಮರೆತು ಮುಖ್ಯಮಂತ್ರಿಗಳಿಗೆ ಮನವಿ ಮಾಡಬೇಕು. ನಮ್ಮ ಬೇಡಿಕೆಗಳು ಈಡೇರಿದಿದ್ದರೆ ಕೊನೆಯ ಘಟ್ಟವಾಗಿ ಅಮರಣಾಂತ ಉಪವಾಸಕ್ಕೆ ಮುಂದಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
NEWS DESK
TIMES OF BENGALURU