ಸಿದ್ಧರಾಮಯ್ಯ ನಿವಾಸಕ್ಕೆ ಸಿ.ಎಂ. ಇಬ್ರಾಹಿಂ ಭೇಟಿ

ಬೆಂಗಳೂರು: ಮಾಜಿ ಸಚಿವ ಸಿ.ಎಂ ಇಬ್ರಾಹಿಂ ಅವರು ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಭೇಟಿ ನೀಡಿದರು. ಕಾಂಗ್ರೆಸ್ ನಲ್ಲಿರುವ ಸಿ ಎಂ ಇಬ್ರಾಹಿಂ ಅವರು ಜೆಡಿಎಸ್ ಸೇರಲಿದ್ದಾರೆ ಎಂಬ ಸುದ್ದಿಯ ಬೆನ್ನಲ್ಲೇ ಈ ರೀತಿ ಸಿದ್ದರಾಮಯ್ಯರನ್ನು ಭೇಟಿ ಮಾಡಿರುವುದು ಕುತೂಹಲ ಮೂಡಿಸಿದೆ.

ಜೆಡಿಎಸ್ ಗೆ ಸೇರುವ ವಿಚಾರವಾಗಿ ಮಾತನಾಡಿದ ಅವರು, ಅದು ಇಲ್ಲಿ ತೀರ್ಮಾನ ಆಗುವುದಿಲ್ಲ. ದೆಹಲಿಯಲ್ಲಿ ತೀರ್ಮಾನ ಆಗುತ್ತದೆ. ಸಮಯ ಸಿಕ್ಕಾಗ ದೆಹಲಿಗೆ ಹೋಗಿ ಬರುತ್ತೇನೆ ಎಂದರು. ಮೊನ್ನೆ ಇಬ್ರಾಹಿಂ ನಿವಾಸಕ್ಕೆ ಸಿದ್ದರಾಮಯ್ಯ ಭೇಟಿ ಮಾಡಿ ಊಟ ಮಾಡಿದ ವಿಚಾರಕ್ಕೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ಎಲ್ಲ ದೇವರ ದಯೆ, ಋಣ ಸಂದಾಯ.. ಎಂದಷ್ಟೇ ಹೇಳಿದರು.

 

NEWS DESK

TIMES OF BENGALURU