ಬಿಬಿಎಂಪಿ ವಿರುದ್ಧ ಹೈಕೋರ್ಟ್‍ಗೆ ಪಿಐಎಲ್

ಬೆಂಗಳೂರು : ಇತ್ತೀಚೆಗೆ ನಗರದಲ್ಲಿ ಪಾದಚಾರಿ ಮಾರ್ಗಗಳು ಮಂಗಮಾಯವಾಗುತ್ತಿದೆ. ಇದನ್ನು ಖಾಸಗಿ ವ್ಯಕ್ತಿಗಳು ಒತ್ತುವರಿ ಮಾಡುವುದರ ಜತೆಗೆ  ಪೊಲೀಸ್ ಹಾಗೂ ಬಿಬಿಎಂಪಿಯಿಂದಲೇ ಒತ್ತುವರಿ ಮಾಡಲಾಗುತ್ತಿದೆ ಎಂದು ಆರೋಪಿಸಿ ಹೈಕೋರ್ಟ್‍ನಲ್ಲಿ ಲೆಟ್ಜ್ ಕಿಟ್ ಫೌಂಡೇಷನ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದೆ.

ನಡಿಗೆದಾರರಿಗೆ ಅನುಕೂಲ ಆಗುವಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಅರ್ಜಿ ಕೋರಲಾಗಿದೆ. ಅರ್ಜಿಯಲ್ಲಿ ಸೂಚಿಸಿದ ಜಾಗಗಳನ್ನು ಪರಿಶೀಲಿಸಲು ಅಧಿಕಾರಿಗಳನ್ನು ನಿಯೋಜಿಸಲು ಬಿಬಿಎಂಪಿಗೆ ನಿರ್ದೇಶನ ನೀಡಲಾಗುತ್ತಿದೆ. ಪರಿಶೀಲನೆಯಲ್ಲಿ ಅತಿಕ್ರಮಣ ಕಂಡು ಬಂದರೆ ತೆರವುಗೊಳಿಸಬೇಕು ಎಂದು ಪೀಠ ತಿಳಿಸಿದೆ.

 

NEWSDESK

TIMES OF BENGALURU