ಬೆಂಗಳೂರು: ಕನ್ನಡದ ಖ್ಯಾತ ಕವಿ ಸಾಹಿತಿ ಡಾ.ಎನ್.ಎಸ್. ಲಕ್ಷ್ಮೀನಾರಾಯಣ ಭಟ್ಟರು ವಿಧಿವಶರಾಗಿದ್ದಾರೆ. ಅವರಿಗೆ 85ವರ್ಷ ವಯಸ್ಸಾಗಿದ್ದು, ಧೀರ್ಘಕಾಲ ಅನಾರೋಗ್ಯದಿಂದ ಬಳಲುತ್ತಿದ್ದರು. ಎನ್.ಎಸ್.ಎಲ್. ಎಂದೇ ಸಾಹಿತ್ಯಲೋಕದಲ್ಲಿ ಮನೆಮಾತಾಗಿದ್ದರು. ಲಕ್ಷ್ಮೀನಾರಾಯಣಭಟ್ಟರು ಇಂದು ಬೆಳಗಿನ ಜಾವ ಬನಶಂಕರಿಯ ತಮ್ಮ ಮನೆಯಲ್ಲಿ ನಿಧನರಾಗಿದ್ದಾರೆ.
ಕನ್ನಡದಲ್ಲಿ ಎಮ್ಎ ಪದವಿ ಪಡೆದ ಬಳಿಕ ಭಾಷಾಶಾಸ್ತ್ರ ಸಂಶೋಧಕರಾಗಿ ಎರಡು ವರ್ಷ ಕೆಲಸ ಮಾಡಿ ಬಳಿಕ ಪ್ರಾಧ್ಯಪಕರಾಗಿ ಸೇವೆ ಸಲ್ಲಿಸಿದ್ದಾರೆ. ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟರು 1936 ರ ಅಕ್ಟೋಬರ್ 29 ರಂದು ಶಿವಮೊಗ್ಗದಲ್ಲಿ ಜನಿಸಿದ ಇವರು ಭಾವಗೀತೆ, ಸಾಹಿತ್ಯ ವಿಮರ್ಶೆ, ನವ್ಯಕವಿತೆ, ಅನುವಾದ ಮೊದಲಾದ ಪ್ರಕಾರಗಳಲ್ಲಿ ಸಾಹಿತ್ಯ ರಚಿಸಿದ್ದಾರೆ.
NEWS DESK
TIMES OF BENGALURU