ಗ್ರಾಮೀಣ ಕ್ರೀಡಾಪಟುಗಳಿಗೆ ಕ್ರೀಡಾ ವಿಜ್ಞಾನ ಕೇಂದ್ರ ಸ್ಥಾಪನೆ

ಬೆಂಗಳೂರು : ಗ್ರಾಮೀಣ ಪ್ರತಿಭಾವಂತ ಕ್ರೀಡಾಪಟುಗಳನ್ನು ಸಾಮಥ್ರ್ಯದ ಆಧಾರದ ಮೇಲೆ ಆಯ್ಕೆ ಮಾಡಲು ರಾಜ್ಯದಲ್ಲಿ ಕ್ರೀಡಾ ವಿಜ್ಞಾನ ಕೇಂದ್ರವನ್ನು 2 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.

ದೇವನಹಳ್ಳಿಯಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಫುಟ್‍ಬಾಲ್, ಹಾಕಿ, ಶೂಟಿಂಗ್, ಈಜು, ಟೆನ್ನಿಸ್ ಕ್ರೀಡೆಗಳಿಗೆ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾ ಸೌಲಭ್ಯ ಸೃಷ್ಟಿಸುವ ಮೂಲಕ ರಾಜ್ಯದ ಕ್ರೀಡಾಪಟುಗಳನ್ನು ಮುಂದಿನ ಒಲಂಪಿಕ್‍ಗೆ ಸಜ್ಜುಗೊಳಿಸಲಾಗುವುದು. ಮಂಡ್ಯದ ಕ್ರೀಡಾಂಗಣಕ್ಕೆ 10 ಕೋಟಿ ಅನುದಾನ ನೀಡಲಾಗಿದೆ. ಬೆಂಗಳೂರಿನಲ್ಲಿ ರಾಷ್ಟ್ರಮಟ್ಟದ ವಿಶ್ವವಿದ್ಯಾಲಯ ಕ್ರೀಡಾಕೂಟವನ್ನು 2022ರಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ. ಜಕ್ಕೂರಿನಲ್ಲಿರುವ ಸರ್ಕಾರಿ ವೈಮಾನಿಕ ತರಬೇತಿ ಶಾಲೆಯ ಸೌಲಭ್ಯಾವೃದ್ಧಿಗೆ 2 ಕೋಟಿ ಅನುದಾನ ಒದಗಿಸಿದೆ ಎಂದು ತಿಳಿಸಿದರು.

 

NEWS DESK

TIMES OF BENGALURU