ಅಯೋಧ್ಯೆಯಲ್ಲಿ ಯಾತ್ರಿ ನಿವಾಸಕ್ಕೆ 10 ಕೋಟಿ ರೂ.

ಬೆಂಗಳೂರು : ದೇಶದ ಜನರು ಕಾತುರದಿoದ ಕಾಯುತ್ತಿರುವ ಅಯೋಧ್ಯೆ ಶ್ರೀರಾಮನ ಮಂದಿರ ನಿರ್ಮಾಣದ ನಂತರ ಕರ್ನಾಟಕದಿಂದ ತೆರಳುವ ಭಕ್ತಾದಿಗಳ ಅನುಕೂಲಕ್ಕಾಗಿ ಯಾತ್ರಿ ನಿವಾಸ ನಿರ್ಮಾಣವಾಗುತ್ತಿದ್ದು, ಕಟ್ಟಡ ನಿರ್ಮಾಣಕ್ಕಾಗಿ 2021-22ನೇ ಸಾಲಿನ ಬಜೆಟ್‍ನಲ್ಲಿ ಅನುದಾನ ಪ್ರಕಟಿಸಲಾಗಿದೆ.

ಆಯೋಧ್ಯೆಯಲ್ಲಿ ಯಾತ್ರಿ ನಿವಾಸ ನಿರ್ಮಾಣಕ್ಕಾಗಿ ಬೇಕಿರುವ ಅಗತ್ಯ ಭೂಮಿಯನ್ನು ಉತ್ತರಪ್ರದೇಶ ಸರ್ಕಾರ ಮಂಜೂರು ಮಾಡಿದೆ. 5 ಎಕರೆ ಭೂಮಿಯಲ್ಲಿ ಕರ್ನಾಟಕ ಯಾತ್ರಿ ನಿವಾಸ ನಿರ್ಮಾಣ ಮಾಡಲು 10 ಕೋಟಿ ರು ಅನುದಾನ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ತಮ್ಮ ಬಜೆಟ್  ತಿಳಿಸಿದರು. ಕರ್ನಾಟಕದ ಲಕ್ಷಾಂತರ ಭಕ್ತರ ಅನುಕೂಲಕ್ಕಾಗಿ ಸುಸಜ್ಜಿತ ಯಾತ್ರಿನಿವಾಸ ನಿರ್ಮಾಣ ಮಾಡಲು 5 ಎಕರೆ ಭೂಮಿಯನ್ನು ಮಂಜೂರು ಮಾಡುವಂತೆ ಕರ್ನಾಟಕ ಸರ್ಕಾರ ಮನವಿ ಮಾಡಿತ್ತು. ಇನ್ನೊಂದೆಡೆ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ದೇಣಿಗೆ ಸಂಗ್ರಹ ಪೂರ್ಣಗೊಂಡಿದೆ.

 

NEWS DESK

TIMES OF BENGALURU