ನಿಯಮ ಪಾಲಿಸದ ಟಿವಿ ಚಾನಲ್‍ಗಳ ವಿರುದ್ಧ ಕ್ರಮ

ಬೆಂಗಳೂರು: ಮಾರ್ಚ್ 6 ರಂದು ಕರ್ನಾಟಕ ಹೈಕೋರ್ಟ್ ಆದೇಶವನ್ನು ಉಲ್ಲೇಖಿಸಿ ಬೆಂಗಳೂರು ಪೊಲೀಸ್ ಆಯುಕ್ತರು ಈ ಆದೇಶದಲ್ಲಿ ಕೇಬಲ್ ಟೆಲಿವಿಷನ್ ನೆಟ್ ವರ್ಕ್ ನಿಯಮಗಳ ಪ್ರಕಾರ ಇರದ ಕಾರ್ಯಕ್ರಮಗಳ ಪ್ರಸಾರವನ್ನು ನಿಷೇಧಿಸಿ ಎಂದು ಆದೇಶದಲ್ಲಿ ತಿಳಿಸಿದ್ದಾರೆ ಎನ್ನಲಾಗಿದೆ. ಕಾರ್ಯಕ್ರಮ ಪ್ರಸಾರದ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸದ ಟಿವಿ ಚಾನೆಲ್ ಗಳ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಿದೆ ಕರ್ನಾಟಕ ಪೊಲೀಸ್ ತನ್ನ ಆದೇಶದಲ್ಲಿ ತಿಳಿಸಿದೆ.

ಕೇಬಲ್ ಟೆಲಿವಿಷನ್ ನೆಟ್ ವಕ್ರ್ಸ್ ನಿಯಮಗಳನ್ನು ಮೀರಿ ನಡೆದುಕೊಳ್ಳುವ ಟಿವಿ ಚಾನೆಲ್‍ಗಳ ವಿರುದ್ದ ಸಂಬಂಧಪಟ್ಟ ಕಾನೂನಿನ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಿಕೊಳ್ಳಬಹುದು ಎಂದು ಆದೇಶದಲ್ಲಿ ಬೆಂಗಳೂರು ಪೊಲೀಸರು ತಿಳಿಸಿದ್ದಾರೆ ಎನ್ನಲಾಗಿದೆ.

NEWS DESK

TIMES OF BENGALURU