ಕಡ್ಡಾಯವಾಗಿ ಕನ್ನಡ ಭಾಷೆಯನ್ನೇ ಬಳಸಬೇಕು

ಬೆಂಗಳೂರು : ಇತ್ತೀಚೆಗೆ ನಗರ ಗ್ರಾಮೀಣ ಪ್ರದೇಶಗಳಲ್ಲಿನ ಹೋಟೆಲ್, ಮಾಲ್, ಮಳಿಗೆಗಳು ಹಾಗೂ ಬ್ಯಾಂಕ್‍ಗಳು ಸೇರಿದಂತೆ ಎಲ್ಲಾ ಸಂಸ್ಥೆಗಳು ಇಂಗ್ಲೀಷ್ ಮಯವಾಗಿವೆ. ಇದರಿಂದ ಕನ್ನಡ ಬಳಕೆ ಕಮ್ಮಿಯಾಗುತ್ತಿರುವ ಕಾರಣ, ಕಡ್ಡಾಯವಾಗಿ ಕನ್ನಡ ಭಾಷೆಯಲ್ಲಿಯೇ ವ್ಯವಹರಿಸುವಂತ ಕಾನೂನು ರೂಪಿಸಬೇಕೆಂದು ವಿಧಾನಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಒತ್ತಾಯಿಸಿದರು.

ಈ ವಿಷಯ ಪ್ರಸ್ತಾಪಿಸಿದ ಅವರು, ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆ. ಆದರೆ ಕನ್ನಡ ಬಳಕೆಯ ಬಗ್ಗೆ ಜಾಗೃತಿ ಮೂಡಿಸುವ ಪರಿಸ್ಥಿತಿ ಬಂದಿದೆ. ಕನ್ನಡ ಅಭಿವೃದ್ದಿ ಪ್ರ್ರಕಾರ ಕನ್ನಡ ನಾಮಫಲಕಗಳ ಬಗ್ಗೆ ಅಭಿಯಾನ ಆರಂಭಿಸಿದೆ. ಸರ್ಕಾರ ಸೂಕ್ತ ಕಾನೂನು ರೂಪಿಸಬೇಕು ಕನ್ನಡ ನಾಮಫಲಕಗಳನ್ನು ಕಡ್ಡಾಯಗೊಳಿಸಬೇಕು. ಹೋಟೆಲ್, ಮಾಲ್, ವಾಣಿಜ್ಯ ಮಳಿಗೆಗಳು, ಬ್ಯಾಂಕ್‍ಗಳಲ್ಲಿ ಕನ್ನಡ ಕಡ್ಡಾಯ ಬಳಕೆಗೆ ಸೂಕ್ತ ಕಾನೂನು ತರಬೇಕೆಂದು ಒತ್ತಾಯಿಸಿದರು.

 

NEWS DESK

TIMES OF BENGALURU