ಎಸ್‍ಡಿಎ ಪರೀಕ್ಷೆ ಮುಂದೂಡಿಕೆ

ಬೆಂಗಳೂರು : ಪೂರ್ವಸಿದ್ಧತೆ ತಯಾರಿಗೆ ಸಮಯದ ಕೊರತೆ ಉಂಟಾಗಿರುವುದರಿಂದ ಇದೇ ತಿಂಗಳ 20 ಮತ್ತು 21ರಂದು ನಿಗದಿಯಾಗಿದ್ದ ದ್ವಿತೀಯ ದರ್ಜೆ ಸಹಾಯಕ (ಎಸ್‍ಡಿಎ) ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯನ್ನು ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‍ಸಿ) ಮುಂದೂಡಿದೆ.

ಮುಂದೂಡಲಾಗಿರುವ ಎಸ್‍ಡಿಎ ಪರೀಕ್ಷೆಯ ಹೊಸ ದಿನಾಂಕವನ್ನು ಶೀಘ್ರದಲ್ಲಿಯೇ ಪ್ರಕಟಿಸಲಾಗುವುದು ಎಂದು ಕೆಪಿಎಸ್‍ಸಿ ಕಾರ್ಯದರ್ಶಿ ಜಿ. ಸತ್ಯವತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಾರ್ಚ್ 20ರಂದು ಕಡ್ಡಾಯ ಕನ್ನಡ ಮತ್ತು ಮಾರ್ಚ್ 21ರಂದು ಸಾಮಾನ್ಯ ಜ್ಞಾನ ಮತ್ತು ಸಾಮಾನ್ಯ ಕನ್ನಡ ಪತ್ರಿಕೆಗಳ ಪರೀಕ್ಷೆಗಳನ್ನು ನಿಗದಿಗೊಳಿಸಲಾಗಿತ್ತು. ಆದರೆ, ಫೆಬ್ರವರಿ 28ರಂದು ಪ್ರಥಮ ದರ್ಜೆ ಸಹಾಯಕರ (ಎಫ್‍ಡಿಎ) ಹುದ್ದೆಗಳ ಭರ್ತಿಗಾಗಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿರುವುದು ಎಸ್‍ಡಿಎ ಪರೀಕ್ಷೆ ಮೇಲೆ ಪರಿಣಾಮ ಬೀರಿದೆ.

 

NEWS DESK

TIMES OF BENGALURU