ನಿಯಮ ಉಲ್ಲಂಘಿಸಿದ ಶಾಲೆಗಳ ವಿರುದ್ಧ ಕ್ರಮ

ಬೆಂಗಳೂರು : ಕೆಲ ಖಾಸಗಿ ಶಾಲೆಗಳು ಸರ್ಕಾರದ ಅನುಮತಿ ಇಲ್ಲದಿದ್ದರೂ 1-6ನೇ ತರಗತಿಯ ಮಕ್ಕಳಿಗೆ ಶಾಲೆ ಪುನರಾರಂಭಿಸಿರುವುದರ ಬಗ್ಗೆ ದೂರು ಬಂದಿವೆ. ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಕಾರಣ ಶಾಲೆಗಳನ್ನು ಪ್ರಾರಂಭಿಸುವ ಬಗ್ಗೆ ಸರ್ಕಾರ ಇನ್ನೂ ಯಾವುದೇ ತೀರ್ಮಾನಗಳನ್ನು ತೆಗೆದುಕೊಂಡಿಲ್ಲ. ಆದರೆ ಕೆಲ ಖಾಸಗಿ ನಿಯಮವನ್ನು ಉಲ್ಲಂಘಿಸಿ ತರಗತಿಗಳನ್ನು ಆರಂಭಿಸಿವೆ.

ಇದೀಗ ನಿಯಮ ಉಲ್ಲಂಘಿಸಿ ತರಗತಿಗಳನ್ನು ಪುನರಾರಂಭಿಸಿರುವ ಶಾಲೆಗಳ ವಿರುದ್ಧ ಪರವಾನಗಿ ರದ್ದು ಸೇರಿದಂತೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಅವರಿಗೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮನವಿ ಮಾಡಿದ್ದಾರೆ.

ಈ ಕುರಿತಂತೆ ಟ್ವಿಟ್ ಮಾಡಿರುವಂತ ಅವರು, ನೆರೆಯ ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಗಳಲ್ಲಿ 13,000ಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಇದು ನನ್ನನ್ನು ಚಿಂತೆಗೀಡುಮಾಡಿದೆ. ಇದನ್ನು ಎಚ್ಚರಿಕೆಯ ಗಂಟೆ ಎಂದು ಪರಿಗಣಿಸಿ, ಹಬ್ಬ-ಹರಿದಿನಗಳು, ಸಭೆ-ಸಮಾರಂಭಗಳು ಏನೇ ಇದ್ದರೂ ಮಾಸ್ಕ್ ಧರಿಸಿವುದು, ಭೌತಿಕ ಅಂತರವನ್ನು ತಪ್ಪದೇ ಪಾಲಿಸಬೇಕು. ಜನಸಂದಣಿಯಿಂದ ದೂರವಿರಬೇಕು ಎಂದಿದ್ದಾರೆ.

 

NEW DESK

TIMES OF BENGALURU