ಮಹಾನಗರಿಯಲ್ಲಿ ಕೊರೊನಾ ಆರ್ಭಟ

ಬೆಂಗಳೂರು : ಮಹಾನಗರಿ ಬೆಂಗಳೂರಿನಲ್ಲಿ ಕೊರೊನಾವೈರಸ್ ಸೋಂಕಿನ ಹರಡುತ್ತಿರುವ ವೇಗ ಜನರ ಎದೆಯಲ್ಲಿ ಮತ್ತಷ್ಟು ಭಯವನ್ನು ಹುಟ್ಟು ಹಾಕುತ್ತಿದೆ. ಕಳೆದ 24 ಗಂಟೆಗಳಲ್ಲಿ ಎರಡು ಜಿಲ್ಲೆಗಳಲ್ಲೇ ಅತಿಹೆಚ್ಚು ಸೋಂಕಿತ ಪ್ರಕರಣಗಳು ವರದಿಯಾಗಿವೆ. ಬೆಂಗಳೂರಿನಲ್ಲಿ ಒಂದೇ ದಿನ 492 ಮಂದಿಗೆ ಸೋಂಕು ತಗುಲಿದ್ದರೆ, ಮೈಸೂರಿನಲ್ಲಿ 50 ಜನರಿಗೆ ಕೊವಿಡ್-19 ಸೋಂಕು ಅಂಟಿರುವುದು ದೃಢಪಟ್ಟಿದೆ.

ರಾಜ್ಯದಲ್ಲಿ ಒಂದೇ ದಿನ 783 ಜನರಿಗೆ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 9,57,584ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

NEWS DESK

TIMES OF BENGALURU