ಕೋವಿಡ್ ಲಸಿಕೆ ಪಡೆಯಲಿರುವ ಸಿಎಂ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಕೋವಿಡ್ ಲಸಿಕೆ ಪಡೆದು ಮಾದರಿಯಾಗಿದ್ದರು ಇದರ ಬೆನ್ನಲೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಸಂಜೆ 4 ಗಂಟೆಗೆ ಕೋವಿಡ್ ಲಸಿಕೆ ಪಡೆಯುತ್ತಾರೆ ಎಂಬ ಮಾಹಿತಿ ತಿಳಿದು ಬಂದಿದೆ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಆವರಣದಲ್ಲಿನ ಪ್ರಧಾನಮಂತ್ರಿ ಸ್ವಾಸ್ಥ್ಯ ಸುರಕ್ಷಾ ಯೋಜನಾ ಆಸ್ಪತ್ರೆಯಲ್ಲಿ ಸಿಎಂ ಯಡಿಯೂರಪ್ಪ ಅವರು ಕೋವಿಡ್ ಲಸಿಕೆ ಪಡೆಯಲಿದ್ದು, ಆ ಬಳಿಕ ವಿಶ್ರಾಂತಿ ಪಡೆಯಲಿದ್ದಾರೆ ಎಂಬ ಮಾಹಿತಿಯಿದೆ.

ಅವರ ಜೊತೆ ಸಂಪುಟದ ಸಹೋದ್ಯೋಗಿಗಳು ಲಸಿಕೆ ಪಡೆಯಲಿದ್ದಾರೆ ಎಂಬುದು ಈವರೆಗೂ ಖಚಿತಪಟ್ಟಿಲ್ಲ. ಸದ್ಯಕ್ಕೆ ಸಿಎಂ ಮಾತ್ರ ಲಸಿಕೆಯನ್ನು ಪಡೆಯಲಿದ್ದು, ನಂತರದ ದಿನಗಳಲ್ಲಿ ಕೆಲವು ಸಚಿವರು ಕೂಡ ಹಾಕಿಸಿಕೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.ಕೆಲ ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೋವಿಡ್ ಲಸಿಕೆ ಪಡೆದಿದ್ದರು. ನಿನ್ನೆಯಷ್ಟೇ ಪ್ರಧಾನಿ ಮೋದಿಯವರ ತಾಯಿ ಹೀರಾ ಬೆನ್ ಲಸಿಕೆ ಹಾಕಿಸಿಕೊಂಡಿದ್ದರು.

 

NEWS DESK
TIMES OF BEGALURU