ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸ್‌ಗೆ ಸೇರ್ಪಡೆ

ಬೆಂಗಳೂರು: ಜೆಡಿಎಸ್‌ಗೆ ಮತ್ತೊಂದು ಬಿಗ್ ಶಾಕ್ ಎದುರಾಗಿದೆ. ಉಪಚುನಾವಣೆ ಹೊತ್ತಲ್ಲೇ ಜೆಡಿಎಸ್‌ಗೆ ಮತ್ತೊಂದು ತಿರುಗೇಟು, ನನ್ನ ಜೊತೆಗೆ ಗೀತಾ ಶಿವರಾಜ್ ಕುಮಾರ್ ಸಹ ಕಾಂಗ್ರೆಸ್‌ಗೆ ಸೇರ್ಪಡೆಯಾಗಲಿದ್ದಾರೆ ಎಂದು ಮಾಜಿ ಶಾಸಕ ಮಧುಬಂಗಾರಪ್ಪ ಹೇಳಿದ್ದಾರೆ.

ಇಂದು ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಮಧುಬಂಗಾರಪ್ಪ,  ಡಿಕೆಶಿ ಅಧ್ಯಕ್ಷತೆಯಲ್ಲಿ ನನಗೆ ಕೆಲಸ ಮಾಡುವ ಅವಕಾಶ ಸಿಕ್ಕಿದೆ. ಕಾಂಗ್ರೆಸ್ ಸೇರಲು ಅಕ್ಕ ನನಗೆ ಮೊದಲಿನಿಂದಲೂ ಹೇಳುತ್ತಿದ್ದರು, ಈ ದೇಶಕ್ಕೆ ಕಾಂಗ್ರೆಸ್ ಅವಶ್ಯಕತೆ ಎದ್ದು ಕಾಣುತ್ತಿದೆ ಎಂದರು. ಗೀತಾ ಶಿವರಾಜ್ ಕುಮಾರ್ ಕೂಡ ಕಾಂಗ್ರೆಸ್ ಸೇರಲಿದ್ದಾರೆ ಎಂದರು.

 

NEWS DESK

TIMES OF BANGALURU