ಮತ್ತೊಮ್ಮೆ ಮುಷ್ಕರಕ್ಕೆ ಕರೆ ಕೊಟ್ಟ ಸಾರಿಗೆ ನೌಕರರು

ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಮಜ್ದೂರ್ ಸಂಘ ಒಕ್ಕೂಟ ಮಾರ್ಚ್ 18 ರಿಂದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹಕ್ಕೆ ಕರೆ ಕೊಟ್ಟಿದೆ. ಪ್ರಮುಖ ನಾಲ್ಕು ಬೇಡಿಕೆಗಳನ್ನು ಈಡೇರಿಸುವಂತೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಧರಣಿ ಸತ್ಯಗ್ರಹ ನಡೆಸುವುದಾಗಿ ತಿಳಿಸಿದೆ.

ಆರನೇ ವೇತನ ಆಯೋಗ ಸೇರಿದಂತೆ 9 ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮೌರ್ಯ ಸರ್ಕಲ್‍ನಲ್ಲಿ ಚಲೋ ನಡೆಸಲಿದ್ದಾರೆ. ಸಾವಿರಾರು ನೌಕರರು ಸತ್ಯಾಗ್ರಹದಲ್ಲಿ ಭಾಗಿಯಾಗಲಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಬಿಎಂಟಿಸಿ, ಕೆಎಸ್‍ಆರ್​​ಟಿಸಿ ಬಸ್ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

 

NEWS DESK

TIMES OF BENGALURU