ವೀರಪ್ಪ ಮೊಯಿಲಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಎಂ.ವೀರಪ್ಪ ಮೊಯಿಲಿ ಸೇರಿದಂತೆ ೨೦ ಬರಹಗಾರರು ೨೦೨೦ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳಿಗೆ ಆಯ್ಕೆಯಾಗಿದ್ದಾರೆ. ರಾಜಕಾರಣದ ಜತೆ ಸಾಹಿತಿಯಾಗಿಯೊ ಗುರುತಿಸಿಕೊಂಡಿರುವ ಎಂ.ವೀರಪ್ಪ ಮೊಯಿಲಿ ಅವರು ‘ಶ್ರೀ ಬಾಹುಬಲಿ ಅಹಿಂಸಾ ದಿಗ್ವಿಜಯಂ’ ಎಂಬ ಮಹಾಕಾವ್ಯ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಕಟಿಸಿರುವ ೨೦೨೦ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪಟ್ಟಿಯಲ್ಲಿ ಆಯ್ಕೆಯಾಗಿದೆ.

ಇಂಗ್ಲಿಷ್, ಹಿಂದಿ ಸೇರಿದಂತೆ ವಿವಿಧ ಭಾಷೆಗಳಲ್ಲಿ ತಲಾ ಒಂದು ಕೃತಿಯನ್ನು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಏಳು ಕವನ ಸಂಕಲನ, ನಾಲ್ಕು ಕಾದಂಬರಿಗಳು, ಐದು ಸಣ್ಣಕಥೆ, ಎರಡು ನಾಟಕಗಳು, ಒಂದು ಆತ್ಮಚರಿತ್ರೆ ಮತ್ತು ಒಂದು ಮಹಾಕಾವ್ಯಕ್ಕೆ ಪ್ರಶಸ್ತಿ ಲಭಿಸಿದೆ. ಸಾಹಿತಿಗಳಾದ ಅರವಿಂದ ಮಾಲಗತ್ತಿ ಮತ್ತು ಎಸ್‌ಜಿ ಸಿದ್ದರಾಮಯ್ಯ ಅವರನ್ನು ಒಳಗೊಂಡ ತೀರ್ಪುಗಾರರ ಮಂಡಳಿ ಆಯ್ಕೆ ಮಾಡಿದೆ. ಪ್ರಶಸ್ತಿ ಪ್ರದಾನ ದಿನಾಂಕವನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುವುದು ಎಂದು ಅಕಾಡೆಮಿ ತಿಳಿಸಿದೆ.

 

NEWS DESK

TIMES OF BENGALURU