ಬೆಂಗಳೂರು : ಇಂದಿನ ಅಧಿವೇಶನ ಬಹಳ ವಾದ-ಪ್ರತಿವಾದ, ವಾಗ್ವಾದ, ಗದ್ದಲ, ಕೋಲಾಹಲದಲ್ಲಿ ಆರಂಭವಾಗುವ ನಿರೀಕ್ಷೆಯಿದೆ. ಅಲ್ಲದೇ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲ ಮೂಡಿಸಿದ್ದ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಇದೀಗ ರಾಜಕೀಯ ತಿರುವು ಪಡೆದುಕೊಂಡಿದ್ದು, ಸದಾಶಿವನಗರದಲ್ಲೇ ಷಡ್ಯಂತ್ರ ಎಂದು ರಮೇಶ್ ಜಾರಕಿಹೊಳಿ ದೂರು ನೀಡಿದ್ದು, ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ.
ಇಂದಿನಿಂದ ಮತ್ತೆ ಸಿಡಿ ಸ್ಪೋಟವೇ ಸದನದೊಳಗೆ ಸದ್ದು ಮಾಡಿ ಗದ್ದಲಕ್ಕೆ ಕಾರಣವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.ಇಂದು ಬಜೆಟ್ ಮೇಲೆ ವಿಪಕ್ಷ ನಾಯಕ ಸಿದ್ದರಾಮಯ್ಯ ಚರ್ಚೆ ಆರಂಭಿಸಬೇಕಾಗಿದೆ. ಬೆಳಗ್ಗೆ 11 ಗಂಟೆಗೆ ಪ್ರಶ್ನೋತ್ತರ ಅವಧಿ ಮೂಲಕ ಕಲಾಪ ಆರಂಭವಾಗುತ್ತದೆ. ವಿಧಾನಸಭೆ ಮತ್ತು ವಿಧಾನ ಪರಿಷತ್ ಎರಡೂ ಕಡೆಗಳಲ್ಲಿ ಇದು ಚರ್ಚೆಗೆ ಬರಲಿದೆ. ಇನ್ನು ಇಂಧನ,ಅಗತ್ಯ ವಸ್ತುಗಳ ಬೆಲೆ ಏರಿಕೆ ಚರ್ಚೆಗಳು ನಿಯಮ 69ರಡಿಯಲ್ಲಿ ಚರ್ಚೆಗೆ ಬರುವ ಸಾಧ್ಯತೆಯಿದ್ದು ವಿರೋಧ ಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲಿವೆ ಎನ್ನಲಾಗುತ್ತೆದೆ.
NEWS DESK
TIMES OF BENGALURU