ಬೆಂಗಳೂರು : ರಾಜ್ಯದಲ್ಲಿ ದಿನಕ್ಕೊಂದು ಪ್ರತಿಭಟನೆಗಳು ನಡೆಯುತ್ತಲೇ ಇವೆ. ಇದೀಗ ಬಜೆಟ್ ನಲ್ಲಿ ಬೇಡಿಕೆ ಈಡೇರದ ಹಿನ್ನೆಲೆಯಲ್ಲಿ ಇಂದು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.
ಅಂಗನವಾಡಿ ಕಾರ್ಯಕರ್ತರು ಇಂದು ರಾಜ್ಯಾದ್ಯಂತ ಅಂಗನವಾಡಿ ಬಂದ್ ಮಾಡಿ, ಬೆಂಗಳೂರಿನ ಮೌರ್ಯ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಬೇಡಿಕೆಗಳನ್ನು ಈಡೇರಿಸದ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ಮೌರ್ಯ ಸರ್ಕಲ್ ನಲ್ಲಿ ಎಐಟಿಯುಸಿ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಿದ್ದಾರೆ.
NEWS DESK
BENGALURU