ಕೊರೊನಾ ಆರ್ಭಟ: ಸಿಎಂ ನೇತೃತ್ವದಲ್ಲಿ ಇಂದು ಮಹತ್ವದ ಸಭೆ.!

ಬೆಂಗಳೂರು : ದೇಶದಲ್ಲಿ ಕೊರೊನಾ ಆರ್ಭಟ ಹೆಚ್ಚಾಗ್ತಿರೋದ್ರಿಂದ ರಾಜ್ಯ ಸರ್ಕಾರ ಫುಲ್ ಅಲರ್ಟ್ ಆಗಿದೆ. ಈ ಸಂಬಂಧ ಸಿಎಂ ಬಿಎಸ್​​ ಯಡಿಯೂರಪ್ಪ ನೇತೃತ್ವದಲ್ಲಿ ಇಂದು ಮಹತ್ವದ ಸಭೆ ನಡೆಯಲಿದೆ.

ವಿಧಾನಸೌಧದಲ್ಲಿ ಇಂದು ಸಂಜೆ 5 ಗಂಟೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ, ಆರೋಗ್ಯ ಸಚಿವ ಡಾ ಕೆ.ಸುಧಾಕರ್ ಹಾಗೂ ಆರೋಗ್ಯಾಧಿಕಾರಿಗಳ ಜೊತೆ ಸಿಎಂ ಬಿಎಸ್​ವೈ ವಿಶೇಷ ಸಭೆ ಮಾಡಲಿದ್ದಾರೆ. ಈ ವೇಳೆ ರಾಜ್ಯದಲ್ಲಿ ಹೆಚ್ಚಾಗ್ತಿರೋ ಕೊರೊನಾ ಸೋಂಕಿನ ಬಗ್ಗೆ ಚರ್ಚಿಸಲಿದ್ದಾರೆ. ಅಲ್ಲದೇ ಕೊರೊನಾ ಸೋಂಕು ತಡೆಗಟ್ಟುವ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ.

NEWS DESK

TIMES OF BENGALURU