ಡಿಕೆಶಿಯವರನ್ನು ಭೇಟಿಯಾದ ಶಿವಣ್ಣ

ಬೆಂಗಳೂರು: ಮಧು ಬಂಗಾರಪ್ಪ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾಗುತ್ತಿರುವ ಬೆನ್ನಲ್ಲೇ ಅವರ ಸಹೋದರಿ, ಗೀತಾ ಶಿವರಾಜ್ ಕುಮಾರ್ ಕೂಡ ಕಾಂಗ್ರೆಸ್‌ಗೆ ಸೇರ್ಪಡೆಯಾಗುತ್ತಿದ್ದಾರೆ. ಈ ಬಗ್ಗೆ ಸ್ವತಃ ಮಧು ಬಂಗಾರಪ್ಪ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ಆದರೆ ನಟ ಶಿವರಾಜ್ ಕುಮಾರ್ ನಾನು ರಾಜಕೀಯದ ಬಗ್ಗೆ ಮಾತನಾಡಲು ಹೋಗಿಲ್ಲ. ವೈಯಕ್ತಿಕ ವಿಚಾರಕ್ಕೆ ಭೇಟಿ ನೀಡಿದ್ದೆ. ಇನ್ನು ಮಧು ಬಂಗಾರಪ್ಪ ಯಾವ ಪಕ್ಷಕ್ಕೆ ಸೇರಿದರೂ ಅವರಿಗೆ ಒಳ್ಳೆಯದಾಗಬೇಕು ಅಷ್ಟೇ ಎಂದು ಹೇಳಿದ್ದಾರೆ.

 

NEWS DESK

TIMES OF BENGALURU