ಖಾಸಗಿ ಶಾಲೆಗಳು ಬಂದ್ : ರುಪ್ಸಾ ಎಚ್ಚರಿಕೆ

ಬೆಂಗಳೂರು ; ರಾಜ್ಯ ಸರ್ಕಾರ ಬೇಡಿಕೆ ಈಡೇರಿಕೆಗೆ ಸ್ಪಂದಿಸದಿದ್ದರೆ ಮಾರ್ಚ್ 23 ರ ಬಳಿಕ ಖಾಸಗಿ ಶಾಲೆ ಬಂದ್ ಮಾಡುವ ಬಗ್ಗೆ ರಾಜ್ಯ ಸರ್ಕಾರಕ್ಕೆ ರುಪ್ಸಾ ಎಚ್ಚರಿಕೆ ನೀಡಿದೆ.

ಕರ್ನಾಟಕ ಖಾಸಗಿ ಶಾಲೆಗಳ ಒಕ್ಕೂಟ ರಾಜ್ಯ ಮಟ್ಟದ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ರುಪ್ಸಾ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ, ರಾಜ್ಯ ಸರ್ಕಾರ ಖಾಸಗಿ ಶಾಲೆಗಳ ಬೇಡಿಕೆಗಳನ್ನು ಈಡೇರಿಸದೇ ಇರುವುದರಿಂದ ಮತ್ತೆ ರೋಡಿಗಳಿದು ಪ್ರತಿಭಟನೆ ನಡೆಸಲಾಗುತ್ತದೆ. ಸರ್ಕಾರದ ಆದೇಶದಂತೆ ಶೇ. 70 ರಷ್ಟು ಟ್ಯುಷನ್ ಫೀಸ್ ಕೂಡ ಪೋಷಕರು ಕಟ್ಟುತ್ತಿಲ್ಲ. ಇದರಿಂದ ಶಾಲೆ ನಡೆಸುವುದು ಕಷ್ಟವಾಗಿದೆ. ಹೀಗಾಗಿ ಮಾರ್ಚ್ 23 ರವರೆಗೆ ಬೇಡಿಕೆ ಈಡೇರಿಸಲು ಡೈಡ್ ಲೈನ್ ನೀಡಲಾಗಿದೆ ಎಂದು ಹೇಳಿದ್ದಾರೆ.

NEWS DESK

TIMES OF BEGALURU