ಕರೋನಾ ಪ್ರಕರಣ ಹೆಚ್ಚಳ; ಇಂದು ಬಿಎಸ್‌ವೈ ಸಭೆ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೊರೋನಾ ವೈರಸ್ನ ಅಬ್ಬರ  ಹೆಚ್ಚಳವಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಸಿಎಂ ಬಿ.ಎಸ್ ಯಡಿಯೂರಪ್ಪನವರು ಸಭೆ ಕರೆದಿದ್ದು, ಸಭೆಯಲ್ಲಿ ಕೊರೋನಾ ನಿಯಂತ್ರಿಸಲು ನೈಟ್ ಕರ್ಪ್ಯೂ, ಲಾಕ್ಡೌನ್ ಕುರಿತಂತೆ ಚರ್ಚೆ ನಡೆಸಲಾಗುತ್ತದೆ ಎಂದು ಸಚಿವ ಡಾ. ಕೆ. ಸುಧಾಕರ್ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುಧಾಕರ್, ಇಂದು ಸಿಎಂ ಬಿಎಸ್‌ವೈ ಅವರು ಮಹತ್ವದ ಸಭೆ ಕರೆದಿದ್ದು, ಸಭೆಯಲ್ಲಿ ಕೊರೋನ ನಿಯಂತ್ರಣದ ಬಗ್ಗೆ ಕೈಗೊಳ್ಳಬೇಕಾದ ಕಠಿಣ ನಿಯಮಗಳ ಬಗ್ಗೆ ಚರ್ಚೆ ನಡೆಸಲಾಗುತ್ತದೆ ಎಂದರು.

 

NEWS DESK

TIMES OF BANGALURU