ಸತ್ಯಾಗ್ರಹ ಹಿಂಪಡೆದ ಸ್ವಾಮೀಜಿಗಳು

ಬೆಂಗಳೂರು: 6 ತಿಂಗಳೊಳಗೆ ಆಯೋಗದ ವರದಿ ಪಡೆದು ಮೀಸಲಾತಿ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭರವಸೆ ನೀಡಿದ ಹಿನ್ನೆಲೆಯಲ್ಲಿ ಪಂಚಮಸಾಲಿ ಶ್ರೀಗಳು ಸತ್ಯಾಗ್ರಹ ಸ್ಥಗಿತ ಗೊಳಿಸಿದ್ದಾರೆ. ಪಂಚಮಸಾಲಿ ಸಮಾಜವನ್ನು 2ಎ ಗೆ ಸೇರಿಸುವಂತೆ ಒತ್ತಾಯಿಸಿ ನಡೆಸುತ್ತಿದ್ದ ಹೋರಾಟ, 23 ದಿನಗಳ ಸತ್ಯಾಗ್ರಹವನ್ನು ಸ್ವಾಮೀಜಿ ಅಂತ್ಯಗೊಳಿಸಿದ್ದಾರೆ.

ಪಂಚಮಸಾಲಿ ಸಮುದಾಯವನ್ನು 2ಎ ಪ್ರವರ್ಗಕ್ಕೆ ಸೇರಿಸುವುದು ಸೇರಿದಂತೆ ವಿವಿಧ ಸಮುದಾಯಗಳ ಮೀಸಲಾತಿಗೆ ಸಂಬಂಧಿಸಿದಂತೆ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ಮತ್ತು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ಉನ್ನತಾಧಿಕಾರಿ ಸಮಿತಿ ವರದಿಯನ್ನು ಆರು ತಿಂಗಳೊಳಗೆ ಪಡೆದು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ  ಯಡಿಯೂರಪ್ಪ ಭರವಸೆ ನೀಡಿದ್ದಾರೆ. ಸಿಎಂ ಭರವಸೆ ನೀಡಿದ ಹಿನ್ನಲೆಯಲ್ಲಿ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ 23 ದಿನಗಳಿಂದ ನಡೆದ ಧರಣಿ ಸತ್ಯಾಗ್ರಹ ಹಿಂಪಡೆಯಲಾಗಿದೆ.

 

NEWS DESK

TIMES OF BENGALURU