ಬೆಂಗಳೂರು: ನಟ ಸುದೀಪ್ ಇನ್ನಷ್ಟು ಸಾಧನೆ ಮಾಡಲಿ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಸಿನಿಮಾ ಕ್ಷೇತ್ರದಲ್ಲಿ 25 ವರ್ಷ ಪೂರೈಸಿದ ಸುದೀಪ್ ಅವರ ಬೆಳ್ಳಿ ಮಹೋತ್ಸವ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು. ಸುದೀಪ್ ಕಳೆದ 25 ವರ್ಷಗಳಲ್ಲಿ ಹಲವಾರು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಕನ್ನಡ ಮಾತ್ರವಲ್ಲದೆ, ಹಿಂದಿ, ತೆಲುಗು, ತಮಿಳು ಚಿತ್ರರಂಗದಲ್ಲಿಯೂ ಅವರು ಮಿಂಚುತ್ತಿದ್ದು, ಮುಂದಿನ ದಿನಗಳಲ್ಲಿ ಭಾರತೀಯ ಚಿತ್ರರಂಗಕ್ಕೆ ಇನ್ನಷ್ಟು ಕೊಡುಗೆ ನೀಡಲಿ ಎಂದು ಸಿಎಂ ಶುಭಹಾರೈಸಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಸುದೀಪ್, ಚಿತ್ರರಂಗದಲ್ಲಿ ನಾನು ಬೆಳೆಯಲು ಹಿರಿಯರು ಕಾರಣ ಎಂದು ತಿಳಿಸಿದ್ದಾರೆ. ನಟ ರವಿಚಂದ್ರನ್ ಮಾತನಾಡಿ, ನೋವು ಅನುಭವಿಸಿದಷ್ಟು ಯಶಸ್ಸು ಸಿಗುತ್ತದೆ, ಸುದೀಪ್ ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಎಂದು ಆಶಿಸಿದ್ದಾರೆ. ಶಿವರಾಜಕುಮಾರ್ ಮಾತನಾಡಿ, ಮುಂದಿನ ದಿನಗಳಲ್ಲಿಯೂ ಇಬ್ಬರು ಒಟ್ಟಿಗೆ ಸಿನಿಮಾ ಮಾಡಲಿದ್ದೇವೆ ಎಂದು ಹೇಳಿದ್ದಾರೆ. ಕಾರ್ಯಕ್ರಮದಲ್ಲಿ ಅನೇಕ ನಟರು ಮತ್ತು ಪತ್ರಕರ್ತರು ಭಾಗಿಯಾಗಿದ್ದರು.
NEWS DESK
TIMES OF BENGALURU