ಟೆಲಿಕಾಂ ಕಂಪನಿಗಳಿಗೆ ವಂಚಿಸುತ್ತಿದ್ದ ವ್ಯಕ್ತಿ ಸೆರೆ

ಬೆಂಗಳೂರು: ಅಂತಾರಾಷ್ಟ್ರೀಯ ಪೋನ್ ಕರೆಗಳನ್ನು ಸ್ಥಳೀಯ ಕರೆಗಳನ್ನಾಗಿ ಪರಿವರ್ತಿಸಿ ಟೆಲಿಕಾಂ ಕಂಪನಿಗಳಿಗೆ ವಂಚಿಸುತ್ತಿದ್ದ ಕೇರಳ ಮೂಲದ ಅಶ್ರಫ್ ಉನಿಚಿರವಿಟ್ಟಲ್ ಬಂಧಿತ ಆರೋಪಿ.
ಚಿಕ್ಕಬಾಣವಾರ ತಾನಿದ್ದ ವಾಸಸ್ಥಳ. ಸಿಮ್ ಕಾರ್ಡ್ಗಳನ್ನು ಬಳಸಿ ಅಂತಾರಾಷ್ಟ್ರೀಯ ಕರೆಗಳನ್ನು ಸ್ಥಳೀಯ ಕರೆಗಳನ್ನಾಗಿ ಪರಿವರ್ತನೆ ಮಾಡುತ್ತಿದ್ದ.

ಈ ಮೂಲಕ ದೂರು ಸಂಪರ್ಕ ಇಲಾಖೆ ವಂಚನೆ ಮಾಡುತ್ತಿದ್ದು, ಖಚಿತ ಮಾಹಿತಿ ಮೇರೆಗೆ ಸಿಸಿಬಿ ಎಸಿಪಿ ವೇಣುಗೋಪಾಲ್ ನೇತೃತ್ವದಲ್ಲಿ ದಾಳಿ ನಡೆದಿದೆ. ಈ ವೇಳೆ ಹಲವು ಎಲೆಕ್ಟ್ರಾನಿಕ್ ಉಪಕರಣಗಳು ಸಿಕ್ಕಿದ್ದು, ಅನಧಿಕೃತವಾಗಿ ಟೆಲಿಪೋನ್ ಎಕ್ಸ್ ಚೇಂಜ್ ಮಾಡಿಕೊಂಡಿರುವುದು ಪತ್ತೆಯಾಗಿದೆ. ಅನಧಿಕೃತ  ಜಾಲತಾಣದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ. ಆರೋಪಿತನ ವಿರುದ್ಧ ಉತ್ತರ ವಿಭಾಗದ ಸೈಬರ್ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಿ ವಿಚಾರಣೆಗೆ ಒಳಪಡಿಸಲಾಗಿದೆ.

 

NEWS DESK

TIMES OF BENGALURU