ಸಾಹುಕಾರ್ ನನ್ನು ವಿಚಾರಣೆ ನಡೆಸಿದ ಎಸ್‍ಐಟಿ

ಬೆಂಗಳೂರು: ಸದಾಶಿವನಗರದಲ್ಲಿರುವ ರಮೇಶ್ ಜಾರಕಿಹೊಳಿ ಅವರ ನಿವಾಸಕ್ಕೆ ತೆರಳಿ ವಿಚಾರಣೆಗೆ ನಡೆಸಿದ್ದು, ಎಸ್‍ಐಟಿ ಪೊಲೀಸರ ಎದುರು 4 ಪುಟಗಳ ಹೇಳಿಕೆ ದಾಖಲಿಸಿದ್ದಾರೆ ಎನ್ನಲಾಗಿದೆ. ಎಸಿಪಿ ಧರ್ಮೆಂದ್ರ ಎದುರು ಜಾರಕಿಹೊಳಿ ಹೇಳಿಕೆ ನೀಡಿದ್ದು, ರಾಜಕೀಯ ಷಡ್ಯಂತ್ರ, ಬ್ಲ್ಯಾಕ್ ಮೇಲ್ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗುತ್ತಿದೆ.

ನನ್ನ ವಿರುದ್ಧ ಕಳೆದ 4 ತಿಂಗಳಿಂದ ಬ್ಲ್ಯಾ ಕ್  ಮೇಲ್ ನಡೆಯುತ್ತಿತ್ತು. ನಿನ್ನನ್ನು ರಾಜಕೀಯವಾಗಿ ಅಂತ್ಯಗೊಳಿಸಲಾಗುವುದು ಎಂದು ಧಮ್ಕಿ ಹಾಕಿದ್ದರು. ನನ್ನ ಆಪ್ತನ ಮೂಲಕ ಹಣಕ್ಕಾಗಿ ನನ್ನ ಮೇಲೆ ಒತ್ತಡ ಹಾಕಿದ್ದರು. ಆದರೆ, ನಾನು ಆ ಒತ್ತಡಕ್ಕೆ ಮಣಿದಿರಲಿಲ್ಲ ಎಂದು ಹೇಳಿದ್ದಾರೆ. ಈ ಮೂಲಕ 4 ತಿಂಗಳಿಂದ ನಡೆಯುತ್ತಿದ್ದ ಷಡ್ಯಂತ್ರದ ಬಗ್ಗೆ ಎಸ್‍ಐಟಿಗೆ ಜಾರಕಿಹೊಳಿ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

 

NEWS DESK

TIMES OF BENGALURU