ಸರಗಳ್ಳತನ ಮಾಡುತ್ತಿದ್ದ ನಾಲ್ವರ ಬಂಧನ

ಬೆಂಗಳೂರು: ಬೆಳಗಿನ ಜಾವ ಮತ್ತು ಸಂಜೆ ವೇಳೆಯಲ್ಲಿ ಒಂಟಿಯಾಗಿ ಓಡಾಡುವ ಮಹಿಳೆಯರನ್ನು ಗುರುತಿಸಿ ಸರಗಳ್ಳತನ ಮಾಡುತ್ತಿದ್ದ ನಾಲ್ವರನ್ನು ಉತ್ತರ ವಿಭಾಗದ ಸೋಲದೇವನಹಳ್ಳಿ ಪೊಲೀಸರು ಬಂಧಿಸಿ 134 ಗ್ರಾಂ ಚಿನ್ನಾಭರಣ ಮತ್ತು ಬೈಕ್ ವಶಪಡಿಸಿಕೊಂಡಿದ್ದಾರೆ. ಅರಸೀಕೆರೆ ಮೂಲದ ಶಿವರಾಜ (23), ಪ್ರಕಾಶ್ (27), ಪ್ರಸನ್ನರಾಜ್ (27) ಮತ್ತು ರತ್ನಾ (32) ಬಂಧಿತರು. ಆರೋಪಿಗಳಿಂದ 2 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳುವಲ್ಲಿ ಸೋಲದೇವನಹಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಲಕ್ಷ್ಮಿ ಎಂಬುವರ ಮಾಂಗಲ್ಯ ಸರವನ್ನು ಕಿತ್ತಿಕೊಂಡು ಬೈಕ್ ಹತ್ತಿ ಪರಾರಿಯಾಗಿದ್ದನು. ಆ ಸಂದರ್ಭದಲ್ಲಿ ಲಕ್ಷ್ಮಿ ಅವರ ಕುತ್ತಿಗೆಗೆ ತರಚಿದ ಗಾಯವಾಗಿತ್ತು. ಮಾಂಗಲ್ಯಸರ ಕಿತ್ತುಕೊಂಡು ಹೋದ ಬಗ್ಗೆ ಸೋಲದೇವನಹಳ್ಳಿಯ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಶೋಧ ನಡೆಸುತ್ತಿದ್ದರು. ಈ ವೇಳೆ ಇಬ್ಬರು ವ್ಯಕ್ತಿಗಳು ಅನುಮಾನಸ್ಪದವಾಗಿ  ಓಡಾಡುತ್ತಿರುವುದನ್ನು ಗಮನಿಸಿದ ಪೊಲೀಸರು ಅವರನ್ನು ಬೆನ್ನೆಟ್ಟಿ ಹಿಡಿದು ವಿಚಾರಣೆ ನಡೆಸಿದಾಗ ಸರಗಳ್ಳತನ ಮಾಡಲು ಬಂಧಿರುವರು ಎಂದು ಗೊತ್ತಾಗಿ ಅವರನ್ನು ವಶಕ್ಕೆ ಪಡೆದಿದ್ದಾರೆ.

 

NEWS DESK

TIMES OF BENGALURU